Kannada News Photo gallery Richest CMs of India: Do you know who is the richest CM of the country? What is the position of Basavaraja Bommai National News in kannada
Richest CMs of India: ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು ಗೊತ್ತಾ? ಬಸವರಾಜ ಬೊಮ್ಮಾಯಿಗೆ ಯಾವ ಸ್ಥಾನ
ದೇಶದಲ್ಲಿ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಯಾವ ರಾಜ್ಯದ ಮುಖ್ಯಮಂತ್ರಿ ಯಾವ ಸ್ಥಾನವನ್ನು ಹೊಂದಿದ್ದಾರೆ. ಇಲ್ಲಿದೆ ವರದಿ
1 / 9
ದೇಶದಲ್ಲಿ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಯಾವ ರಾಜ್ಯದ ಮುಖ್ಯಮಂತ್ರಿ ಯಾವ ಸ್ಥಾನವನ್ನು ಹೊಂದಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಯಾವ ಸ್ಥಾನವನ್ನು ಹೊಂದಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ನ ಹೊಸ ವರದಿಯ ಪ್ರಕಾರ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಟ್ಟು 8 ಕೋಟಿ ರೂ. ಆಸ್ತಿ ಹೊಂದಿದ್ದಾರೆ ಮತ್ತು 30 ಮುಖ್ಯಮಂತ್ರಿಗಳ ಪೈಕಿ 13 ನೇ ಶ್ರೀಮಂತರಾಗಿದ್ದಾರೆ.
2 / 9
ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜಗನ್ ಮೋಹನ್ ರೆಡ್ಡಿ ಒಟ್ಟು 510 ಕೋಟಿ ರೂ. ಆಸ್ತಿ ಹೊಂದಿದ್ದಾರೆ,
3 / 9
30 ಮುಖ್ಯಮಂತ್ರಿಗಳಲ್ಲಿ 29 ಮಂದಿ ಕೋಟ್ಯಾಧಿಪತಿಗಳು. ಸಿಎಂ ಬೊಮ್ಮಾಯಿ ಒಟ್ಟು 30 ರಲ್ಲಿ 13 ನೇ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಟ್ಟು 8 ಕೋಟಿ ರೂ. ಆಸ್ತಿ ಹೊಂದಿದ್ದಾರೆ
4 / 9
ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ 15 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ಹೊಂದಿದ್ದು. ಕೊನೆಯ ಸ್ಥಾನದಲ್ಲಿ ನಿಂತಿದ್ದಾರೆ.
5 / 9
ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಹರಿಯಾಣ ಸಿಎಂ ಮನೋಹರ್ ಲಾಲ್ ಅವರು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನಂತರ 1 ಕೋಟಿಗೂ ಹೆಚ್ಚು ಮೌಲ್ಯದ ಕಡಿಮೆ ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್ ಹೇಳಿದೆ.
6 / 9
ಎಡಿಆರ್ 28 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ (ಯುಟಿಗಳು) ದೆಹಲಿ ಮತ್ತು ಪುದುಚೇರಿ ಸಿಎಂಗಳನ್ನು ವಿಶ್ಲೇಷಿಸಿದೆ ಮತ್ತು ಎಲ್ಲಾ 30 ಮುಖ್ಯಮಂತ್ರಿಗಳ ಸ್ವಯಂ-ಪ್ರಮಾಣ ಚುನಾವಣಾ ಅಫಿಡವಿಟ್‌ಗಳನ್ನು ಪರಿಶೀಲಿಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಇಲ್ಲ. ಈ ಕಾರಣಕ್ಕೆ ಇಲ್ಲಿ ಆ ರಾಜ್ಯದ ವರದಿ ನೀಡಿಲ್ಲ.
7 / 9
ಒಡಿಶಾ ಸಿಎಂ ನವೀನ್ ಪಟ್ನಾಯಕ್ 63 ಕೋಟಿ ರೂ. ಆಸ್ತಿಯನ್ನು ಹೊಂದಿದ್ದಾರೆ ಅವರು ಮೂರನೇ ಶ್ರೀಮಂತರಾಗಿದ್ದಾರೆ.
8 / 9
ಅರುಣಾಚಲ ಪ್ರದೇಶ ಸಿಎಂ ಪೆಮಾ ಖಂಡು 163 ಕೋಟಿ ರೂ. ಆಸ್ತಿಯನ್ನು ಹೊಂದಿದ್ದಾರೆ. ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ನಂತರ ಎರಡನೇ ಸ್ಥಾನ ಪಡೆದಿದ್ದಾರೆ
9 / 9
43%ದಷ್ಟು ಮುಖ್ಯಮಂತ್ರಿಗಳು ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ ಎಂದು ಎಡಿಆರ್ ವರದಿಯಲ್ಲಿ ಹೇಳಲಾಗಿದೆ.
Published On - 4:26 pm, Thu, 13 April 23