‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿದೆ. ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಮೋಡಿ ಮಾಡಿದೆ. 300 ಕೋಟಿ ರೂಪಾಯಿಗಿಂತಲೂ ಹೆಚ್ಚು ಕಲೆಕ್ಷನ್ ಆಗಿದೆ.
ಉತ್ತರ ಭಾರತದಲ್ಲೂ ‘ಕಾಂತಾರ’ ಸಿನಿಮಾ ಧೂಳೆಬ್ಬಿಸಿದೆ. ಆ ಮೂಲಕ ರಿಷಬ್ ಶೆಟ್ಟಿ ಅವರಿಗೆ ಪ್ಯಾನ್ ಇಂಡಿಯಾ ಸ್ಟಾರ್ ಎಂಬ ಖ್ಯಾತಿಯನ್ನು ತಂದುಕೊಟ್ಟಿದೆ. ಅವರ ಅಭಿಮಾನಿ ಬಳಗ ಹಿರಿದಾಗಿದೆ.
‘ಕಾಂತಾರ’ ಬಿಡುಗಡೆ ಆದ ನಂತರವೂ ರಿಷಬ್ ಶೆಟ್ಟಿ ಅವರು ಈ ಚಿತ್ರಕ್ಕೆ ಹೆಚ್ಚಿನ ಪ್ರಚಾರ ನೀಡಿದ್ದಾರೆ. ಹಲವು ಕಡೆಗಳಿಗೆ ತೆರಳಿ ಸಂದರ್ಶನ ನೀಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲೂ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ.
ರಿಷಬ್ ಶೆಟ್ಟಿ ಅವರು ಪಂಚೆ ಧರಿಸಿ ಹಲವು ಕಡೆಗಳಿಗೆ ತೆರಳಿದ್ದಾರೆ. ಈ ಗೆಟಪ್ನಲ್ಲಿ ಅವರ ಗತ್ತು ನೋಡಿ ಉತ್ತರ ಭಾರತದ ಮಂದಿ ವಾವ್ ಎಂದಿದ್ದಾರೆ. ಈ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿವೆ.
ಹಿಂದಿಯಲ್ಲಿ ‘ಕಾಂತಾರ’ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಹಿಂದಿ ವರ್ಷನ್ನಿಂದ ಈವರೆಗೂ 67 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಾಲಿವುಡ್ ಸೆಲೆಬ್ರಿಟಿಗಳು ಕೂಡ ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ.
Published On - 8:56 am, Thu, 10 November 22