Updated on:May 20, 2023 | 12:55 PM
ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿಗೆ ದೇವರ ಮೇಲೆ ಅಪಾರ ಭಕ್ತಿ. ‘ಕಾಂತಾರ’ ಸಿನಿಮಾ ಮಾಡಿದ ಬಳಿಕ ದೇವರ ಮೇಲೆ ಇರುವ ಭಕ್ತಿ ಹೆಚ್ಚಾಗಿದೆ.
ರಿಷಬ್ ಶೆಟ್ಟಿ ಅವರು ಆಗಾಗ ಪತ್ನಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡುತ್ತಾ ಇರುತ್ತಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಆ ಬಳಿಕ ಧರ್ಮಸ್ಥಳಕ್ಕೆ ತೆರಳಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ರಿಷಬ್ ಶೆಟ್ಟಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ವೀರೇಂದ್ರ ಹೆಗ್ಗಡೆ ಹಾಗೂ ರಿಷಬ್ ಶೆಟ್ಟಿ ಇಬ್ಬರು ಕುಳಿತು ಸ್ವಲ್ಪ ಹೊತ್ತು ಮಾತುಕತೆ ನಡೆಸಿದ್ದಾರೆ. ಈ ಫೋಟೋಗಳನ್ನು ರಿಷಬ್ ಹಂಚಿಕೊಂಡಿದ್ದಾರೆ.
‘ಇತ್ತೀಚೆಗೆ ಕುಟುಂಬ ಸಮೇತರಾಗಿ ಧರ್ಮಸ್ಥಳ ಹಾಗು ಕುಕ್ಕೆಗೆ ಭೇಟಿ ನೀಡಿ ದೇವರ ದರ್ಶನದ ಜೊತೆ ಧರ್ಮಾಧಿಕಾರಿಗಳಿಂದ ಆಶೀರ್ವಾದವನ್ನು ಪಡೆದೆವು’ ಎಂದು ಫೋಟೋಗೆ ರಿಷಬ್ ಕ್ಯಾಪ್ಶನ್ ನೀಡಿದ್ದಾರೆ.
Published On - 12:40 pm, Sat, 20 May 23