ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಹಾಯಾಗಿ ಸಂಸಾರ ಮಾಡಿಕೊಂಡಿದ್ದಾರೆ. ಇಬ್ಬರೂ ಕೂಡ ಕನ್ನಡ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಈ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳು ಇದ್ದಾರೆ.
ನಟ, ನಿರ್ದೇಶಕ, ನಿರ್ಮಾಪಕನಾಗಿ ರಿಷಬ್ ಶೆಟ್ಟಿ ಫೇಮಸ್ ಆಗಿದ್ದಾರೆ. ಹಲವು ಆಫರ್ಗಳು ಅವರ ಕೈಯಲ್ಲಿವೆ. ‘ಹೊಂಬಾಳೆ ಫಿಲ್ಮ್ಸ್’ ರೀತಿಯ ಪ್ರತಿಷ್ಠಿತ ಬ್ಯಾನರ್ಗಳ ಜೊತೆ ರಿಷಬ್ ಶೆಟ್ಟಿ ಅವರು ಸಿನಿಮಾ ಮಾಡುತ್ತಿದ್ದಾರೆ.
ಪ್ರಗತಿ ಶೆಟ್ಟಿ ಅವರು ಕೂಡ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ವಸ್ತ್ರ ವಿನ್ಯಾಸಕಿಯಾಗಿ ಅವರು ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಪತಿಯ ಬಹುತೇಕ ಎಲ್ಲ ಸಿನಿಮಾಗಳಿಗೆ ಅವರೇ ಕಾಸ್ಟ್ಯೂಮ್ ಡಿಸೈನ್ ಮಾಡುತ್ತಾರೆ.
ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ದಂಪತಿಯ ಮೊದಲ ಮಗುವಿಗೆ ರಣ್ವಿತ್ ಶೆಟ್ಟಿ ಎಂದು ಹೆಸರು ಇಡಲಾಗಿದೆ. ಮುದ್ದಾದ ಕಂದನ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹಂಚಿಕೊಳ್ಳುತ್ತಾರೆ. ರಣ್ವಿತ್ ಕ್ಯೂಟ್ ನಗುವಿಗೆ ಎಲ್ಲರೂ ಫಿದಾ ಆಗಿದ್ದಾರೆ.
ಕೆಲವೇ ದಿನಗಳ ಹಿಂದೆ ರಿಷಬ್ ಶೆಟ್ಟಿ ಅವರ ಮನೆಗೆ ದುಬಾರಿ ಕಾರು ಬಂದಿದೆ. ಆಡಿ ಕ್ಯೂ7 ಕಾರನ್ನು ಅವರು ಖರೀದಿಸಿದ್ದಾರೆ. ಅದಕ್ಕಾಗಿ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಈ ದಂಪತಿಗೆ ಅಭಿನಂದನೆ ತಿಳಿಸಿದ್ದಾರೆ.
Published On - 12:00 pm, Thu, 7 July 22