ಕೃಷ್ಣನ ಅವತಾರದಲ್ಲಿ ಮಿಂಚಿದ ರಿಷಬ್ ಶೆಟ್ಟಿ ಮಕ್ಕಳು; ಪ್ರಗತಿ ಶೆಟ್ಟಿ ಹಂಚಿಕೊಂಡ ಫೋಟೋಗಳಿವು
ರಿಷಬ್ ಶೆಟ್ಟಿ ಅವರು ಮಕ್ಕಳ ಜೊತೆ ಕೃಷ್ಣಾಷ್ಟಮಿ ಆಚರಿಸಿದ್ದಾರೆ. ಮಕ್ಕಳಿಗೆ ಕೃಷ್ಣನ ವೇಷ ಹಾಕಿ ಅವರು ಸಂಭ್ರಮಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಅಭಿಮಾನಿಗಳು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

Pragathi Shetty
- ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಮಕ್ಕಳ ಫೋಟೋ ವೈರಲ್ ಆಗಿದೆ.
- ರಿಷಬ್ ಶೆಟ್ಟಿ ಅವರು ಮಕ್ಕಳ ಜೊತೆ ಕೃಷ್ಣಾಷ್ಟಮಿ ಆಚರಿಸಿದ್ದಾರೆ. ಮಕ್ಕಳಿಗೆ ಕೃಷ್ಣನ ವೇಷ ಹಾಕಿ ಅವರು ಸಂಭ್ರಮಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಅಭಿಮಾನಿಗಳು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
- ಪ್ರಗತಿ ಶೆಟ್ಟಿ-ರಿಷಬ್ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನಿಗೆ ರಣ್ವಿತ್ ಶೆಟ್ಟಿ ಎಂದು ಹೆಸರು ಇಡಲಾಗಿದೆ. ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಲಾಗಿದೆ. ಇವರು ಆಗಾಗ ಮಕ್ಕಳ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.
- ಕೃಷ್ಣನ ಅವತಾರದಲ್ಲಿ ರಣ್ವಿತ್ ಹಾಗೂ ರಾಧ್ಯ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ಸಖತ್ ಇಷ್ಟಪಡುತ್ತಿದ್ದಾರೆ. ಇವರ ಜೊತೆ ರಿಷಬ್ ಕೂಡ ಇರಬೇಕಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.
- ನಟ ರಿಷಬ್ ಶೆಟ್ಟಿ ಅವರು ಸದ್ಯ ‘ಕಾಂತಾರ 2’ ಚಿತ್ರದ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಸ್ಕ್ರಿಪ್ಟ್ ಕೆಲಸ ಬಹುತೇಕ ಪೂರ್ಣಗೊಂಡಿದೆ ಎನ್ನಲಾಗುತ್ತಿದೆ. ಶೂಟಿಂಗ್ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.
- ಪ್ರಗತಿ ಶೆಟ್ಟಿ ಅವರೂ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ರಿಷಬ್ ಮದುವೆ ಆದ ಬಳಿಕ ಅವರಿಗೆ ಚಿತ್ರರಂಗದ ಜೊತೆ ನಂಟು ಬೆಳೆದಿದೆ. ‘ಕಾಂತಾರ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದರು. ಕಾಸ್ಟ್ಯೂಮ್ ಡಿಸೈನರ್ ಆಗಿಯೂ ಕೆಲಸ ಮಾಡಿದ್ದರು.