- Kannada News Photo gallery Rohit Sharma lead Team India arrive in Guwahati and start practice for 2nd T20I against South Africa
IND vs SA: ದ್ವಿತೀಯ ಟಿ20 ಪಂದ್ಯಕ್ಕೆ ಗುವಾಹಟಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ
ಅಕ್ಟೋಬರ್ 2 ರಂದು ಭಾನುವಾರ ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ- ಆಫ್ರಿಕಾ ನಡುವೆ ಎರಡನೇ ಟಿ20 ಪಂದ್ಯ ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ.
Updated on: Oct 01, 2022 | 10:34 AM

ಭಾರತ ಕ್ರಿಕೆಟ್ ತಂಡ ಸದ್ಯ ದಕ್ಷಿಣ ಆಫ್ರಿಕಾ (India vs South Africa) ವಿರುದ್ಧ ಟಿ20 ಸರಣಿ ಆಡುತ್ತಿದೆ. ಮೊದಲ ಟಿ20 ಮುಕ್ತಾಯಗೊಂಡಿದ್ದು ತಿರುವನಂತಪುರಂನ ಗ್ರೀನ್ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತು. ಇದೀಗ ಎರಡನೇ ಕದನಕ್ಕೆ ಭಾರತ ಸಜ್ಜಾಗುತ್ತಿದೆ.

ಅಕ್ಟೋಬರ್ 2 ರಂದು ಭಾನುವಾರ ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ- ಆಫ್ರಿಕಾ ನಡುವೆ ಎರಡನೇ ಟಿ20 ಪಂದ್ಯ ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ.

ಗುವಾಹಟಿ ತಲುಪುತ್ತಿದ್ದಂತೆ ಟೀಮ್ ಇಂಡಿಯಾಗೆ ಆತ್ಮೀಯ ಸ್ವಾಗತ ನೀಡಲಾಯಿತು. ವಿಮಾನ ನಿಲ್ದಾಣದಿಂದ ಟೀಂ ಇಂಡಿಯಾ ಆಟಗಾರರು ಹೊರಬರುತ್ತಲ್ಲೆ ಅಭಿಮಾನಿಗಳ ಗುಂಪು ಭರ್ಜರಿಯಾಗಿ ಸ್ವಾಗತಿಸಿತು. ಜೊತೆಗೆ ಅಲ್ಲಿನ ಸ್ಥಳೀಯ ಕಲಾವಿದರು ಅಸ್ಸಾಂನ ಸಾಂಪ್ರದಾಯಿಕ ನೃತ್ಯವನ್ನೂ ಪ್ರಸ್ತುತಪಡಿಸುವುದರೊಂದಿಗೆ ಆಟಗಾರರನ್ನು ಸ್ವಾಗತಿಸಿದರು.

ಭಾರತೀಯ ಆಟಗಾರರು ಶುಕ್ರವಾರ ಸಂಪೂರ್ಣ ತರಬೇತಿಯಲ್ಲಿ ಪಾಲ್ಗೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಅಭ್ಯಾಸ ಪ್ರಾರಂಭಿಸಿದ ಭಾರತ ತಂಡ ಕೆಲಹೊತ್ತು ಬೆವರು ಹರಿಸಿದ್ದಾರೆ.

ತಿರುವನಂತಪುರಂನಲ್ಲಿ ಟೀಮ್ ಇಂಡಿಯಾ ಗೆಲುವಿನೊಂದಿಗೆ ಸರಣಿ ಆರಂಭಿಸಿದ್ದು, ಇದೀಗ ಎರಡನೇ ಪಂದ್ಯಕ್ಕೆ ಸಿದ್ಧತೆ ಆರಂಭಿಸಿದೆ. ಈ ಪಂದ್ಯಕ್ಕಾಗಿ, ಬುಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ 2ನೇ ಟಿ20 ಪಂದ್ಯಕ್ಕಾಗಿ ಸಿರಾಜ್ ಕೂಡ ಗುವಾಹಟಿಯಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ.

ಬ್ಯಾಟಿಂಗ್ ಅಭ್ಯಾಸದಲ್ಲಿ ವಿರಾಟ್ ಕೊಹ್ಲಿ.

ಬೌಲಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಆರ್. ಅಶ್ವಿನ್.

ತರಬೇತಿಯಲ್ಲಿ ನಿರತರಾಗಿರುವ ಉಮೇಶ್ ಯಾದವ್ ಹಾಗೂ ಹರ್ಷಲ್ ಪಟೇಲ್.
