- Kannada News Photo gallery Rohit Sharma lead Team India Practicing in perth before start IND vs SA T20 world cup Kannada Sports News
IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಭಾರತ ಭರ್ಜರಿ ಅಭ್ಯಾಸ: ಫೋಟೋ ನೋಡಿ
India vs South Africa: ಇಂಡೋ- ಆಫ್ರಿಕಾ ಕದನ ಪರ್ತ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30ಕ್ಕೆ ಶುರುವಾಗಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಪ್ಲೇಯರ್ಸ್ ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.
Updated on:Oct 30, 2022 | 11:41 AM

ಐಸಿಸಿ ಟಿ20 ವಿಶ್ವಕಪ್ನಲ್ಲಿಂದು ರೋಹಿತ್ ಶರ್ಮಾ ನೇತೃತ್ವದ ಭಾರತದ ತಂಡ ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಇಂಡೋ- ಆಫ್ರಿಕಾ ಕದನ ಪರ್ತ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30ಕ್ಕೆ ಶುರುವಾಗಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಪ್ಲೇಯರ್ಸ್ ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

ಭಾರತಕ್ಕೆ ದೊಡ್ಡ ತಲೆನೋವಾಗಿರುವುದು ಕೆಎಲ್ ರಾಹುಲ್ ಫಾರ್ಮ್. ರನ್ ಗಳಿಸಲು ಪರದಾಡುತ್ತಿರುವ ರಾಹುಲ್ ಕಳೆದ ಎರಡೂ ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಇದರಿಂದ ತಂಡ ಉತ್ತಮ ಆರಂಭ ಕೂಡ ಪಡೆದುಕೊಳ್ಳುತ್ತಿಲ್ಲ.

ವಿರಾಟ್ ಕೊಹ್ಲಿ ಒನ್-ಡೌನ್ ಆಗಿ ಕಣಕ್ಕಿಳಿದರೆ ನಂತರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ಹಾರ್ದಿಕ್ ಪಾಂಡ್ಯ ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ದಿನೇಶ್ ಕಾರ್ತಿಕ್ ಕೂಡ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ.

ರವಿಚಂದ್ರನ್ ಅಶ್ವಿನ್ಗೆ ವಿಶ್ರಾಂತಿ ನೀಡಿ ಯುಜ್ವೇಂದ್ರ ಚಹಲ್ ಸ್ಥಾನ ಪಡೆಯುವ ಸಂಭವವಿದೆ.

ಭಾರತ- ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ. ಪಂದ್ಯದ ದಿನ ಕೊಂಚ ಮಳೆ ಬೀಳುವ ಸಂಭವವಿದೆ. ಬೆಳಗ್ಗೆ 10 ಗಂಟೆಯಿಂದ 12 ಗಂಟೆ ನಡುವೆ ಮಳೆ ಆಗಬಹುದು. ಆದರೆ, ನಂತರ ವರುಣನ ಕಾಟ ಇರುವುದಿಲ್ಲ

ಪರ್ತ್ ಸ್ಟೇಡಿಯಂನಲ್ಲಿನ ಪಿಚ್ ಬಗ್ಗೆ ಗಮನಿಸುವುದಾದರೆ, ಇಲ್ಲಿ ಬೌಲರ್‌ಗಳು ಹೆಚ್ಚು ಯಶಸ್ಸು ಸಾಧಿಸುತ್ತಾರೆ. ಈ ಪಿಚ್ ಹೆಚ್ಚು ಬೌನ್ಸ್ ಒದಗಿಸುವ ನಿರೀಕ್ಷೆಯಿದೆ. ವೇಗದ ಬೌಲರ್‌ಗಳು ಮೇಲ್ಮೈಯಲ್ಲಿ ಕಾರ್ಯನಿರ್ವಹಿಸುವುದನ್ನು ಆನಂದಿಸಬೇಕು. ಬೌಲರ್ಗಳ ಜೊತೆಗೆ ಪರ್ತ್‌ನಲ್ಲಿರುವ ಟ್ರ್ಯಾಕ್ ಬ್ಯಾಟಿಂಗ್‌ಗೆ ಉತ್ತಮವಾಗಿದೆ.

ನೆಟ್ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವಿರಾಟ್ ಕೊಹ್ಲಿ ಫೋಟೋ.
Published On - 11:41 am, Sun, 30 October 22
