IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಭಾರತ ಭರ್ಜರಿ ಅಭ್ಯಾಸ: ಫೋಟೋ ನೋಡಿ

Edited By:

Updated on: Oct 30, 2022 | 11:41 AM

India vs South Africa: ಇಂಡೋ- ಆಫ್ರಿಕಾ ಕದನ ಪರ್ತ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30ಕ್ಕೆ ಶುರುವಾಗಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಪ್ಲೇಯರ್ಸ್ ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

1 / 8
ಐಸಿಸಿ ಟಿ20 ವಿಶ್ವಕಪ್​ನಲ್ಲಿಂದು ರೋಹಿತ್ ಶರ್ಮಾ ನೇತೃತ್ವದ ಭಾರತದ ತಂಡ ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಐಸಿಸಿ ಟಿ20 ವಿಶ್ವಕಪ್​ನಲ್ಲಿಂದು ರೋಹಿತ್ ಶರ್ಮಾ ನೇತೃತ್ವದ ಭಾರತದ ತಂಡ ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

2 / 8

ಇಂಡೋ- ಆಫ್ರಿಕಾ ಕದನ ಪರ್ತ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30ಕ್ಕೆ ಶುರುವಾಗಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಪ್ಲೇಯರ್ಸ್ ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

3 / 8

ಭಾರತಕ್ಕೆ ದೊಡ್ಡ ತಲೆನೋವಾಗಿರುವುದು ಕೆಎಲ್ ರಾಹುಲ್ ಫಾರ್ಮ್. ರನ್ ಗಳಿಸಲು ಪರದಾಡುತ್ತಿರುವ ರಾಹುಲ್ ಕಳೆದ ಎರಡೂ ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಇದರಿಂದ ತಂಡ ಉತ್ತಮ ಆರಂಭ ಕೂಡ ಪಡೆದುಕೊಳ್ಳುತ್ತಿಲ್ಲ.

4 / 8

ವಿರಾಟ್ ಕೊಹ್ಲಿ ಒನ್-ಡೌನ್ ಆಗಿ ಕಣಕ್ಕಿಳಿದರೆ ನಂತರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ಹಾರ್ದಿಕ್ ಪಾಂಡ್ಯ ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ದಿನೇಶ್ ಕಾರ್ತಿಕ್ ಕೂಡ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ.

5 / 8

ರವಿಚಂದ್ರನ್ ಅಶ್ವಿನ್​ಗೆ ವಿಶ್ರಾಂತಿ ನೀಡಿ ಯುಜ್ವೇಂದ್ರ ಚಹಲ್ ಸ್ಥಾನ ಪಡೆಯುವ ಸಂಭವವಿದೆ.

6 / 8

ಭಾರತ- ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ. ಪಂದ್ಯದ ದಿನ ಕೊಂಚ ಮಳೆ ಬೀಳುವ ಸಂಭವವಿದೆ. ಬೆಳಗ್ಗೆ 10 ಗಂಟೆಯಿಂದ 12 ಗಂಟೆ ನಡುವೆ ಮಳೆ ಆಗಬಹುದು. ಆದರೆ, ನಂತರ ವರುಣನ ಕಾಟ ಇರುವುದಿಲ್ಲ

7 / 8

ಪರ್ತ್ ಸ್ಟೇಡಿಯಂನಲ್ಲಿನ ಪಿಚ್ ಬಗ್ಗೆ ಗಮನಿಸುವುದಾದರೆ, ಇಲ್ಲಿ ಬೌಲರ್‌ಗಳು ಹೆಚ್ಚು ಯಶಸ್ಸು ಸಾಧಿಸುತ್ತಾರೆ. ಈ ಪಿಚ್ ಹೆಚ್ಚು ಬೌನ್ಸ್ ಒದಗಿಸುವ ನಿರೀಕ್ಷೆಯಿದೆ. ವೇಗದ ಬೌಲರ್‌ಗಳು ಮೇಲ್ಮೈಯಲ್ಲಿ ಕಾರ್ಯನಿರ್ವಹಿಸುವುದನ್ನು ಆನಂದಿಸಬೇಕು. ಬೌಲರ್​ಗಳ ಜೊತೆಗೆ ಪರ್ತ್‌ನಲ್ಲಿರುವ ಟ್ರ್ಯಾಕ್ ಬ್ಯಾಟಿಂಗ್‌ಗೆ ಉತ್ತಮವಾಗಿದೆ.

8 / 8

ನೆಟ್​ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವಿರಾಟ್ ಕೊಹ್ಲಿ ಫೋಟೋ.

Published On - 11:41 am, Sun, 30 October 22

Loading...
Unable to load recommendations.
Follow Us