
‘ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ 18 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಆ ಪೈಕಿ ರೂಪೇಶ್ ಶೆಟ್ಟಿ ವಿನ್ ಆದರೆ, ರಾಕೇಶ್ ಅಡಿಗ ರನ್ನರ್ ಅಪ್ ಆದರು. ದೀಪಿಕಾ ದಾಸ್, ರೂಪೇಶ್ ರಾಜಣ್ಣ ಫಿನಾಲೆ ರೇಸ್ನಲ್ಲಿದ್ದರು.

ಈಗ ಇವರು ಒಂದೆಡೆ ಸೇರಿದ್ದಾರೆ. ಸಂಕ್ರಾಂತಿ ಸಂಭ್ರಮವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕಾವ್ಯಶ್ರೀ ಗೌಡ ಕೂಡ ಇದ್ದರು.

ರೂಪೇಶ್ ಶೆಟ್ಟಿ ಹಾಗೂ ಸಾನ್ಯಾ ಐಯ್ಯರ್ ಮಧ್ಯೆ ಒಳ್ಳೆಯ ಫ್ರೆಂಡ್ಶಿಪ್ ಇದೆ. ಆದರೆ, ಈ ಹಬ್ಬದ ಆಚರಣೆಯಲ್ಲಿ ಸಾನ್ಯಾ ಭಾಗಿ ಆಗಿಲ್ಲ.

ಜನವರಿ 14ರಂದು ಸಂಕ್ರಾಂತಿ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ವಿಶೇಷ ಕಾರ್ಯಕ್ರಮದಲ್ಲಿ ಇವರು ಭಾಗಿ ಆಗಿದ್ದಾರೆ ಎನ್ನಲಾಗಿದೆ.

ಈ ಫೋಟೋಗಳನ್ನು ದೀಪಿಕಾ ದಾಸ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.