- Kannada News Photo gallery Roopesh Shetty starrer Jai Tulu and Kannada movie gets good response in premier show
ಬಿಡುಗಡೆಗೂ ಮುನ್ನ ಜನಮೆಚ್ಚುಗೆ ಗಳಿಸಿದ ರೂಪೇಶ್ ಶೆಟ್ಟಿ ಸಿನಿಮಾ ‘ಜೈ’
ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಅವರು ‘ಜೈ’ ಸಿನಿಮಾದಲ್ಲಿ ನಟಿಸಿ, ನಿರ್ದೇಶನ ಮಾಡಿದ್ದಾರೆ. ವಿದೇಶದಲ್ಲಿ ಈ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ನವೆಂಬರ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಈಗ ‘ಜೈ’ ಚಿತ್ರದ ಪ್ರೀಮಿಯರ್ ಶೋ ನೋಡಿದ ಪ್ರೇಕ್ಷಕರು ಭೇಷ್ ಎಂದಿದ್ದಾರೆ.
Updated on: Oct 28, 2025 | 5:56 PM

ರೂಪೇಶ್ ಶೆಟ್ಟಿ ಅಭಿನಯದ ‘ಜೈ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ತುಳು ಮತ್ತು ಕನ್ನಡದಲ್ಲಿ ಬಿಡುಗಡೆ ಆಗಲಿರುವ ಈ ಸಿನಿಮಾ ತೆರೆ ಕಾಣುವುದಕ್ಕೂ ಮೊದಲೇ ಭರ್ಜರಿ ಸದ್ದು ಮಾಡುತ್ತಿದೆ.

‘ಜೈ’ ಚಿತ್ರದ ಅಂತಾರಾಷ್ಟ್ರೀಯ ಪ್ರೇಮಿಯರ್ ಶೋ ಇತ್ತೀಚೆಗೆ ನಡೆಯಿತು. ಅಲ್ಲಿ ಸಿನಿಮಾ ನೋಡಿದ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಅಕ್ಟೋಬರ್ 24ರಂದು ಮಸ್ಕಟ್ ನಲ್ಲಿ ಮೊದಲ ಪ್ರೇಮಿಯರ್ ನಡೆಯಿತು.

ಆ ಬಳಿಕ ಗೋವಾದಲ್ಲಿ ಅಕ್ಟೋಬರ್ 26ರಂದು ‘ಜೈ’ ಸಿನಿಮಾದ ಇಂಡಿಯನ್ ಪ್ರೇಮಿಯರ್ ನಡೆಯಿತು. ವೀಕ್ಷಕರಿಂದ ‘ಜೈ’ ಸಿನಿಮಾಗೆ ಪ್ರಶಂಸೆ ಸಿಕ್ಕಿದೆ. ಇದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ.

ಇಷ್ಟೇ ಅಲ್ಲದೇ ಬಹರೈನ್, ಕತಾರ್, ದುಬೈನಲ್ಲಿ ಪ್ರೇಮಿಯರ್ ನಡೆಯಲಿದೆ. ನವೆಂಬರ್ 14ರಂದು ವಿಶ್ವದಾದ್ಯಂತ ಈ ಚಿತ್ರ ಬಿಡುಗಡೆ ಆಗಲಿದೆ. ರೂಪೇಶ್ ಶೆಟ್ಟಿ ಫ್ಯಾನ್ಸ್ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಈ ಸಿನಿಮಾದಲ್ಲಿ ರೂಪೇಶ್ ಶೆಟ್ಟಿ, ಸುನೀಲ್ ಶೆಟ್ಟಿ, ರಾಜ್ ದೀಪಕ್ ಶೆಟ್ಟಿ, ಅದ್ವಿತಿ ಶೆಟ್ಟಿ, ಅರವಿಂದ್ ಬೋಳಾರ್, ದೇವದಾಸ್ ಕಾಪಿಕಾಡ್ ಮುಂತಾದವರು ನಟಿಸಿದ್ದಾರೆ. ಟೀಸರ್ ಗಮನ ಸೆಳೆದಿದೆ.




