- Kannada News Photo gallery Rs 5 crore cash seized in Lakshanatti check post at Bagalkot Here are the photos
Bagalakote: ಲಕ್ಷಾನಟ್ಟಿ ಚೆಕ್ಪೋಸ್ಟ್ನಲ್ಲಿ ಕೋಟಿ ಕೋಟಿ ಹಣ ಪತ್ತೆ; ಒಟ್ಟು ಸಿಕ್ಕಿದ್ದೆಷ್ಟು ಗೊತ್ತಾ?
ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಚುನಾವಣಾಧಿಕಾರಿಗಳು ಮತ್ತು ಪೊಲೀಸರು ರಾಜ್ಯಾದ್ಯಂತ ಕೋಟ್ಯಾಂತರ ರೂಪಾಯಿ ನಗದು, ಚಿನ್ನಾಭರಣ ಇತ್ಯಾದಿಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಇದೀಗ ಬಾಗಲಕೋಟೆಯಲ್ಲಿ 5 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ.
Updated on: Apr 29, 2023 | 5:34 PM

ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಚುನಾವಣಾಧಿಕಾರಿಗಳು ಮತ್ತು ಪೊಲೀಸರು ರಾಜ್ಯಾದ್ಯಂತ ಕೋಟ್ಯಾಂತರ ರೂಪಾಯಿ ನಗದು, ಚಿನ್ನಾಭರಣ ಇತ್ಯಾದಿಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಇದೀಗ ಬಾಗಲಕೋಟೆಯಲ್ಲಿ 5 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲಕ್ಷಾನಟ್ಟಿ ಚೆಕ್ಪೋಸ್ಟ್ನಲ್ಲಿ ಚುನಾವಣಾಧಿಕಾರಿಗಳು ಹಾಗೂ ಲೋಕಾಪುರ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಕಾರಿನಲ್ಲಿ ಐದು ಕೋಟಿ ಪತ್ತೆಯಾಗಿದೆ.

ಹುಬ್ಬಳ್ಳಿಯಿಂದ ಮುಧೋಳ ಮಾರ್ಗವಾಗಿ ಹೋಗುತ್ತಿದ್ದ ಬೊಲೆರೊ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ.

ಸದ್ಯ 5 ಕೋಟಿ ಹಣ ಯೂನಿಯನ್ ಬ್ಯಾಂಕ್ಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಗಿದ್ದು, ಕಾರಿನಲ್ಲಿದ್ದ ಐವರನ್ನು ವಿಚಾರಣೆ ನಡೆಸಲಾಗುತ್ತಿದೆ.

ಹುಬ್ಬಳ್ಳಿ ಯೂನಿಯನ್ ಬ್ಯಾಂಕ್ನಿಂದ ಮುಧೋಳ ಬ್ಯಾಂಕ್ಗೆ ಸಾಗಣೆ ಮಾಡಲಾಗುತ್ತಿತ್ತು. ಆದರೆ ಸೂಕ್ತ ದಾಖಲೆ ನೀಡದ ಹಿನ್ನೆಲೆ 5 ಕೋಟಿ ಹಣ ಸಹಿತ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.