ಗಾಳಿ ಆಂಜನೇಯ ದೇವಸ್ಥಾನಕ್ಕೆ RSS ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ: ಇಲ್ಲಿವೆ ಫೋಟೋಸ್
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ವೇಳೆ ಮಂಗೇಶ ಬೇಂಡೆ, ಭರತ್ ಕುಮಾರ್ ಸಾಥ್ ನೀಡಿದರು.
Updated on:Nov 07, 2025 | 10:35 PM

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆದರು.

ನವೆಂಬರ್ 8 ಮತ್ತು 9ರಂದು ನಡೆಯಲಿರುವ ‘ಸಂಘದ 100 ವರ್ಷದ ಪಯಣ: ನವ ಕ್ಷಿತಿಜ’ ಉಪನ್ಯಾಸ ಕಾರ್ಯಕ್ರಮ ಹಿನ್ನೆಲೆ ಡಾ. ಮೋಹನ್ ಭಾಗವತ್ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ಈ ವೇಳೆ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ಆಂಜನೇಯ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ.

ರಾಷ್ಟೀಯ ಸ್ವಯಂಸೇವಕ ಸಂಘವು ನೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈ ನಿಟ್ಟಿನಲ್ಲಿ ಪಥಸಂಚಲನ ಸೇರಿದಂತೆ ವಿಜಯದಶಮಿ ಉತ್ಸವಗಳು, ಯುವ ಸಮಾವೇಶ, ವಿಚಾರಗೋಷ್ಠಿ ಮುಂತಾದ ವಿವಿಧ ಚಟುವಟಿಕೆಗಳನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ.

ಈ ಸಂದರ್ಭದಲ್ಲಿ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ, ಕ್ಷೇತ್ರೀಯ ಪ್ರಚಾರಕ ಭರತ್ ಕುಮಾರ್ ಉಪಸ್ಥಿತರಿದ್ದರು.
Published On - 10:34 pm, Fri, 7 November 25




