15 ದಿನಗಳ ಹಿಂದಷ್ಟೇ ಮಂಗಳೂರಿನ ಮಂಗಳಾದೇವಿ ದರ್ಶನ ಪಡೆದಿದ್ದ ‘ಎಸ್‌ ಜಾನಕಮ್ಮ’: ಇಲ್ಲಿವೆ ಫೋಟೋಸ್​​

Updated on: Jul 11, 2026 | 10:52 PM

S Janaki Passes Away: ಗಾನ ಕೋಗಿಲೆ ಎಸ್. ಜಾನಕಿ ಅವರು 88ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 20 ಭಾಷೆಗಳಲ್ಲಿ 48,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ಅವರ ಅಗಲಿಕೆಗೆ ಸಂಗೀತ ಲೋಕ ಕಂಬನಿ ಮಿಡಿದಿದೆ. ಕೇವಲ 15 ದಿನಗಳ ಹಿಂದೆ ಮಂಗಳೂರಿಗೆ ಭೇಟಿ ನೀಡಿದ್ದರು. ಫೋಟೋಸ್​ ಇಲ್ಲಿವೆ ನೋಡಿ.

1 / 5
ಬರೋಬ್ಬರಿ 20 ಭಾಷೆಗಳಲ್ಲಿ 48 ಸಾವಿರ ಹಾಡುಗಳನ್ನ ಆಡಿದ್ದ ಗಾನ ಕೋಗಿಲು ಇಂದು ಹಾಡೋದನ್ನ ನಿಲ್ಲಿಸಿದೆ. 88 ವರ್ಷಗಳ ಸಾರ್ಥಕ ಜೀವನ ನಡೆಸಿದ್ದ ಜಾನಕಮ್ಮ ವಿಧಿವಶರಾಗಿದ್ದಾರೆ. 15 ದಿನಗಳ ಹಿಂದೆಯಷ್ಟೇ ಮಂಗಳೂರಿಗೆ ಭೇಟಿ ನೀಡಿದ್ದರು.

ಬರೋಬ್ಬರಿ 20 ಭಾಷೆಗಳಲ್ಲಿ 48 ಸಾವಿರ ಹಾಡುಗಳನ್ನ ಆಡಿದ್ದ ಗಾನ ಕೋಗಿಲು ಇಂದು ಹಾಡೋದನ್ನ ನಿಲ್ಲಿಸಿದೆ. 88 ವರ್ಷಗಳ ಸಾರ್ಥಕ ಜೀವನ ನಡೆಸಿದ್ದ ಜಾನಕಮ್ಮ ವಿಧಿವಶರಾಗಿದ್ದಾರೆ. 15 ದಿನಗಳ ಹಿಂದೆಯಷ್ಟೇ ಮಂಗಳೂರಿಗೆ ಭೇಟಿ ನೀಡಿದ್ದರು.

2 / 5

ಎಸ್‌.ಜಾನಕಿ ಅವರು ನಿಧನಕ್ಕೂ ಕೇವಲ 15 ದಿನಗಳ ಮುನ್ನವಷ್ಟೇ ಮಂಗಳೂರಿನ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನ ಮತ್ತು ಕಮಲಶಿಲೆಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು.

3 / 5

ಭಾರತೀಯ ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ಗಾಯಕಿ ಎಸ್‌.ಜಾನಕಿ ವಿಧಿವಶ ಹಿನ್ನಲೆ ಇಡೀ ಸಂಗೀತ ಕ್ಷೇತ್ರ ಕಂಬನಿ ಮಿಡಿದಿದೆ. ಕನ್ನಡ ಚಿತ್ರರಂಗ ಸೇರಿದಂತೆ ರಾಜಕೀಯ ನಾಯಕರು ಕೂಡ ಸಂತಾಪ ಸೂಚಿಸಿದ್ದಾರೆ.

4 / 5

ಭಾನುವಾರ ಮೈಸೂರಿನಲ್ಲಿ ಸಾರ್ವಜನಿಕ ಅಂತಿಮ ದರ್ಶನದ ಬಳಿಕ, ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಮೊಮ್ಮಗಳು ಅಪ್ಸರಾ ಅವರಿಂದ ಜಾನಕಿ ಅಮ್ಮನ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

5 / 5

ಎಸ್‌.ಜಾನಕಿ ಅವರು ಇನ್ನಿಲ್ಲವಾದ್ರೂ ಅವರು ಹಾಡಿದ್ದ ಹಾಡುಗಳು ಮಾತ್ರ ಅಮರ. ಕರುನಾಡಿನ ಪ್ರತಿಯೊಬ್ಬರ ಬಾಯಲ್ಲೂ ಅವರ ಹಾಡು ಗುನುಗುತ್ತವೆ.

Published On - 10:51 pm, Sat, 11 July 26

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us