AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಶ್ವತವಾಗಿ ಹಾಡು ನಿಲ್ಲಿಸಿದ ಕನ್ನಡಿಗರ ಹೆಮ್ಮೆಯ ಗಾನ ಕೋಗಿಲೆ ‘ಎಸ್‌ ಜಾನಕಮ್ಮ’: ಇಲ್ಲಿವೆ ಫೋಟೋಸ್​​

S Janaki Passes Away: ಕನ್ನಡಿಗರ ಹೆಮ್ಮೆಯ ಗಾನ ಕೋಗಿಲೆ ಎಸ್. ಜಾನಕಿ ಅವರು ತಮ್ಮ 88ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48,000ಕ್ಕೂ ಹೆಚ್ಚು ಗೀತೆಗಳಿಗೆ ಧ್ವನಿಯಾಗಿ, 4 ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದ ಅವರ ಸಂಗೀತ ಪಯಣ ಅವಿಸ್ಮರಣೀಯ. ಭಾರತೀಯ ಸಂಗೀತ ಲೋಕಕ್ಕೆ ಅವರ ಕೊಡುಗೆ ಅಪಾರ. ಇಲ್ಲಿವೆ ಫೋಟೋಸ್​.

ಗಂಗಾಧರ​ ಬ. ಸಾಬೋಜಿ
|

Updated on:Jul 11, 2026 | 9:57 PM

Share
ಕನ್ನಡಿಗರ ಹೆಮ್ಮೆಯ ಗಾನ ಕೋಗಿಲೆ ಎಸ್. ಜಾನಕಿ ಅವರು ಇನ್ನಿಲ್ಲ. ತಮ್ಮ 88ನೇ ವಯಸ್ಸಿನಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಗೀತೆಗಳಿಗೆ ಜೀವ ತುಂಬಿದ್ದ ಆ ದೈವಿ ಕಂಠ ಈಗ ಶಾಶ್ವತವಾಗಿ ಮೌನವಾಗಿದೆ.

1 / 7
ಎಸ್.ಜಾನಕಿ, ಮೂಲತಃ ಆಂಧ್ರಪ್ರದೇಶದವರು. 1938ರ ಏಪ್ರಿಲ್ 23ರಂದು ಗುಂಟೂರು ಜಿಲ್ಲೆಯ ಪಲ್ಲಪಟ್ಲ ಗ್ರಾಮದಲ್ಲಿ ಜನಿಸಿದರು. ಇವರಿಗೆ ಬಾಲ್ಯದಿಂದಲೇ ಸಂಗೀತವೆಂದರೆ ಪಂಚಪ್ರಾಣ. ಕೇವಲ 3ನೇ ವಯಸ್ಸಿನಲ್ಲೇ ಸಂಗೀತದತ್ತ ಆಕರ್ಷಿತರಾಗಿದ್ದ ಅವರು, ಶಾಸ್ತ್ರೀಯ ಸಂಗೀತಗಾರ ಪೈಡಿ ಸ್ವಾಮಿಯವರಿಂದ ಸಂಗೀತದ ಪ್ರಾಥಮಿಕ ಪಾಠ ಕಲಿತರು.

2 / 7
1957ರಲ್ಲಿ ಸಿನಿಮಾ ಸಂಗೀತ ಪ್ರಪಂಚಕ್ಕೆ ಜಾನಕಿ ಪದಾರ್ಪಣೆ ಮಾಡಿದರು. ತಮಿಳಿನ ‘ವಿಧಿವಿಲಕ್ಕು’ ಚಿತ್ರದ ಮೂಲಕ ಗಾನ ಯಾನ ಆರಂಭಿಸಿದರು. 20ಕ್ಕೂ ಹೆಚ್ಚು ಭಾಷೆಗಳಲ್ಲಿ, 48,000ಕ್ಕೂ ಹೆಚ್ಚು ಗೀತೆಗಳಿಗೆ ಜಾನಕಿ ಅವರು ಧ್ವನಿ ಆಗಿದ್ದರು.

3 / 7
1957ರಲ್ಲಿ ‘ರತಿಮನ್ಮಥ’ ಚಿತ್ರದ ‘ತುಂಬಿ ಬಂದಾಡ ಭ್ರಮರ’ ಹಾಡಿನ ಮೂಲಕ ಎಸ್​​.ಜಾನಕಿ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಹುಟ್ಟಿನಿಂದ ತೆಲುಗಿನವರಾದರೂ, ಅವರಿಗೆ ಅತಿ ಹೆಚ್ಚು ಪ್ರೀತಿ, ಗೌರವ ಸಂಪಾದಿಸಿಕೊಟ್ಟಿದ್ದು ಕನ್ನಡ ನಾಡು. ಕನ್ನಡಿಗರು ಅವರನ್ನು ‘ಗಾನ ಕೋಗಿಲೆ’ ಎಂದೇ ಅಪ್ಪಿಕೊಂಡರು.

4 / 7
ವರನಟ ಡಾ. ರಾಜ್‌ಕುಮಾರ್ ಮತ್ತು ಎಸ್. ಜಾನಕಿ ಅವರ ಕಾಂಬಿನೇಷನ್ ಕನ್ನಡ ಚಿತ್ರರಂಗದಲ್ಲಿ ಸುವರ್ಣ ಯುಗವನ್ನೇ ಸೃಷ್ಟಿಸಿತ್ತು. ಪಿ.ಬಿ. ಶ್ರೀನಿವಾಸ್ ಮತ್ತು ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರೊಂದಿಗೆ ಜಾನಕಿಯವರು ಹಾಡಿದ ಭಾವನಾತ್ಮಕ ಯುಗಳ ಗೀತೆಗಳು ಎಂದೆಂದಿಗೂ ಸದಾ ಹಸಿರು.

5 / 7
ಎಸ್​​ ಜಾನಕಿ ಅವರು 4 ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. 33 ವಿವಿಧ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಸಂದಿವೆ. ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್, ತಮಿಳುನಾಡು ಸರ್ಕಾರದಿಂದ ‘ಕಲೈಮಾಮಣಿ' ಗೌರವವೂ ಸಿಕ್ಕಿತ್ತು. ಅಷ್ಟೇ ಅಲ್ಲ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

6 / 7
60 ವರ್ಷಗಳ ತಮ್ಮ ಸುದೀರ್ಘ ಸಂಗೀತ ಪಯಣಕ್ಕೆ 2016ರಲ್ಲಿ ವಿರಾಮ ಹೇಳಿದ್ದ ಜಾನಕಿಯವರು, 2017ರಲ್ಲಿ ಮೈಸೂರಿನಲ್ಲಿಯೇ ತಮ್ಮ ಕೊನೆಯ ಸಾರ್ವಜನಿಕ ಕಾರ್ಯಕ್ರಮ ನೀಡಿ ನಿವೃತ್ತರಾಗಿದ್ದರು.

7 / 7

Published On - 9:53 pm, Sat, 11 July 26

Follow Us
ಎಸ್​. ಜಾನಕಿ ನಿಧನ ನೆನೆದು ದುಃಖಿತರಾದ ಶಾಸಕ ಜಿ.ಟಿ. ದೇವೇಗೌಡ

ಗಾನಕೋಗಿಲೆ ಎಸ್​.ಜಾನಕಿ ನಿಧನ
ಗಾನಕೋಗಿಲೆ ಎಸ್​.ಜಾನಕಿ ನಿಧನ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ

ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ

ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ

ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ

ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ

14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​

ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ