ಇಬ್ಬರು ಗಂಡು ಮಕ್ಕಳು, ಓರ್ವ ಹೆಣ್ಣು ಮಗುವಿನ ತಾಯಿಯಾಗಿದ್ದ ಸಾಕಮ್ಮಾ, ಮಾನಸಿಕ ಸಮಸ್ಯೆ ಹೊಂದಿದ್ದರು. ಮಕ್ಕಳಾದ ವಿಕ್ರಮ್, ಬೋಧರಾಜ್, ಲಕ್ಷ್ಮೀ ಚಿಕ್ಕವರಿರುವಾಗಲೇ ಹೊಸಪೇಟೆಯಿಂದ ಆಕಸ್ಮಿಕವಾಗಿ ರೈಲು ಹತ್ತಿದ್ದ ಸಾಕಮ್ಮ, ಹಿಮಾಚಲ ಪ್ರದೇಶಕ್ಕೆ ಹೋಗಿದ್ದರು. ಅನಾಥವಾಗಿದ್ದ ಸಾಕಮ್ಮಾ ಹಿಮಾಚಲ ಪ್ರದೇಶದ ಮಂಡಿಯ ನಿರಾಶ್ರಿತ ಶಿಬಿರದಲ್ಲೇ ಆಶ್ರಯ ಪಡೆದಿದ್ದರು.