ಹಾಸನ: ಚಂದಾ ಎತ್ತಿ ಹದಗೆಟ್ಟ ಗ್ರಾಮದ ರಸ್ತೆಯನ್ನು ರಿಪೇರಿ ಮಾಡಿದ ಊರಿನವರು
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬುಗಡಹಳ್ಳಿ ಗ್ರಾಮದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ಬಗ್ಗೆ ಅನೇಕ ಸಲ ದೂರು ನೀಡಿದರೂ ಜನಪ್ರತಿನಿಧಿಗಳು ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮನೆ ಮನೆಗೆ ಹೋಗಿ ಹಣ ಸಂಗ್ರಹಿಸಿ ರಸ್ತೆ ರಿಪೇರಿ ಮಾಡಿದರು.