Updated on: Apr 01, 2022 | 9:51 AM
ನಟಿ ಸಮಂತಾ ಅವರು ವಿಚ್ಛೇದನ ಪಡೆದ ನಂತರದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಹೊಸಹೊಸ ಪ್ರಾಜೆಕ್ಟ್ಗಳನ್ನು ಒಪ್ಪಿಕೊಳ್ಳುವ ಮೂಲಕ, ನಾನಾ ಕಡೆಗಳಲ್ಲಿ ಸುತ್ತಾಟ ಮಾಡುವ ಮೂಲಕ ತಮ್ಮ ಜೀವನದಲ್ಲಾದ ಕಹಿ ಘಟನೆಯನ್ನು ಮರೆಯಲು ಸಮಂತಾ ಪ್ರಯತ್ನಿಸುತ್ತಿದ್ದಾರೆ.
ಈ ಮಧ್ಯೆ ಸಮಂತಾ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ, ಊಹೂ ಅಂತೀಯಾ ಮಾವ..’ ಹಾಡಿನಲ್ಲಿ ಸ್ಯಾಮ್ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಈ ಸಾಂಗ್ ನೋಡಿ ಅಭಿಮಾನಿಗಳು ಹುಚ್ಚೆದ್ದು ಕುಣಿದಿದ್ದರು.
ಈಗ ಸಮಂತಾ ಮ್ಯಾಗಜಿನ್ ಒಂದಕ್ಕಾಗಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಶೂಟ್ನಲ್ಲಿ ಸಮಂತಾ ಹಾಟ್ ಅವತಾರ ತಾಳಿದ್ದಾರೆ. ಈ ಫೋಟೋ ನೋಡಿ ಪಡ್ಡೆಗಳು ಕಣ್ಣರಳಿಸಿದ್ದಾರೆ.
ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹಿಂದಿಯ ವೆಬ್ ಸೀರಿಸ್ ಒಂದರಲ್ಲಿ ಸಮಂತಾ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಸಮಂತಾ ವಿಚ್ಛೇದನ ಘೋಷಣೆ ಮಾಡಿದರು. ಆ ಬಳಿಕ ಅವರು ಒಂದು ಸಣ್ಣ ಬ್ರೇಕ್ ತೆಗೆದುಕೊಂಡು ಹಲವು ಕಡೆಗಳಲ್ಲಿ ಸುತ್ತಾಟ ನಡೆಸಿದರು. ಈಗ ಬಣ್ಣದ ಲೋಕದಲ್ಲಿ ಮತ್ತೆ ಬ್ಯುಸಿ ಆಗಿದ್ದಾರೆ.