Updated on: Mar 21, 2023 | 4:48 PM
ನಟಿ ಸಮಂತಾ ರುತ್ ಪ್ರಭು ಅವರು ಅನಾರೋಗ್ಯದಿಂದ ಚೇತರಿಸಿಕೊಂಡಿದ್ದಾರೆ. ಈಗ ಅವರು ಮೊದಲಿನಂತೆ ಆ್ಯಕ್ಟೀವ್ ಆಗಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಹೊಸ ಹೊಸ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿದ್ದಾರೆ.
ಸಮಂತಾ ರುತ್ ಪ್ರಭು ನಟಿಸಿರುವ ‘ಶಾಕುಂತಲಂ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 14ರಂದು ಈ ಚಿತ್ರ ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಸಮಂತಾ ಅವರು ಶಕುಂತಲೆಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸಮಂತಾ ರುತ್ ಪ್ರಭು ಅವರು ಆ್ಯಕ್ಟೀವ್ ಆಗಿದ್ದಾರೆ. ‘ಶಾಕುಂತಲಂ’ ಸಿನಿಮಾದ ಪ್ರಚಾರದ ಸಲುವಾಗಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿವೆ.
ಅನಾರೋಗ್ಯದಿಂದ ಚೇತರಿಸಿಕೊಂಡ ಬಳಿಕ ಸಮಂತಾ ಮತ್ತೆ ಮೊದಲಿನಂತೆ ವರ್ಕೌಟ್ ಆರಂಭಿಸಿದ್ದಾರೆ. ಪ್ರತಿ ದಿನ ಅವರು ತಪ್ಪದೇ ವ್ಯಾಯಾಮ ಮಾಡುತ್ತಾರೆ. ಅದರ ಬಗ್ಗೆ ಕೂಡ ಅವರು ಆಗಾಗ ಅಪ್ಡೇಟ್ ನೀಡುತ್ತಾ ಇರುತ್ತಾರೆ.
ಸಮಂತಾ ಅವರು ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಅವರ ಕೈಯಲ್ಲಿ ಹಲವು ಸಿನಿಮಾ ಆಫರ್ಗಳಿವೆ. ವಿಜಯ್ ದೇವರಕೊಂಡ ಜೊತೆ ‘ಖುಷಿ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಹಲವು ವೆಬ್ ಸಿರೀಸ್ಗಳಲ್ಲಿ ಅಭಿನಯಿಸುತ್ತಿದ್ದಾರೆ.