Galaxy M34 5G: 6,000mAh ಬ್ಯಾಟರಿ, ಅದ್ಭುತ ಕ್ಯಾಮೆರಾ: ಇಂದು ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಫೋನ್ ಬಿಡುಗಡೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಕ್ಯಾಮೆರಾದಲ್ಲಿ ಸಾಕಷ್ಟು ಆಯ್ಕೆಗಳನ್ನು ನೀಡಲಾಗಿದ್ದು ಫೋಟೋ ತೆಗೆಯುವಾಗ ಅಥವಾ ವಿಡಿಯೋ ಮಾಡುವಾಗ ಕೈ ಶೇಕ್ ಆದರೂ ಅದ್ಭುತವಾಗಿ ಸೆರೆ ಹಿಡಿಯುತ್ತಂತೆ. ಈ ಸ್ಮಾರ್ಟ್‌ಫೋನ್ ಇಂದು ಜುಲೈ 7 ರಂದು ಭಾರತದ ಮಾರುಕಟ್ಟೆಗೆ ಅಪ್ಪಳಿಸುತ್ತಿದೆ.
1 / 7
ದಕ್ಷಿಣ ಕೊರಿಯಾ ಮೂಲದ ಪ್ರಸಿದ್ಧ ಟೆಕ್ ಸಂಸ್ಥೆ ಸ್ಯಾಮ್‌ಸಂಗ್ ತನ್ನ ಹೊಸ ಗ್ಯಾಲಕ್ಸಿ ಎಮ್34 5ಜಿ ಸ್ಮಾರ್ಟ್ಫೋನ್ನ ಬಿಡುಗಡೆ ಮಾಡಲು ಸಜ್ಜಾಗಿದೆ. ಬರೋಬ್ಬರಿ 6,000mAh ಬ್ಯಾಟರಿ ಸಾಮರ್ಥ್ಯ ಹೊಂದಿರುವ ಈ ಸ್ಮಾರ್ಟ್‌ಫೋನ್ ಇಂದು ಜುಲೈ 7 ರಂದು ಭಾರತದ ಮಾರುಕಟ್ಟೆಗೆ ಅಪ್ಪಳಿಸುತ್ತಿದೆ.
2 / 7
ಕಂಪನಿ ಹೇಳಿರುವ ಪ್ರಕಾರ ಈ ಫೋನನ್ನು ಸತತವಾಗಿ ಉಪಯೋಗಿಸುತ್ತಿದ್ದರೂ ಎರಡು ದಿನಗಳ ಕಾಲ ಬ್ಯಾಟರಿ ಬ್ಯಾಕಪ್ ಬರಲಿದೆಯಂತೆ. ಜೊತೆಗೆ ಇದರಲ್ಲಿ 120Hz ನ ಸೂಪರ್ ಅಮೊಲೊಡ್ ಡಿಸ್ ಪ್ಲೇ ನೀಡಲಾಗಿದೆ. 50 ಮೆಗಾ ಪಿಕ್ಸೆಕ್ ಪ್ರೈಮರಿ ಸೆನ್ಸಾರ್ನ ಕ್ಯಾಮೆರಾ ನೀಡಲಾಗಿದೆ.
3 / 7
ಕ್ಯಾಮೆರಾದಲ್ಲಿ ಸಾಕಷ್ಟು ಆಯ್ಕೆಗಳನ್ನು ನೀಡಲಾಗಿದ್ದು ಫೋಟೋ ತೆಗೆಯುವಾಗ ಅಥವಾ ವಿಡಿಯೋ ಮಾಡುವಾಗ ಕೈ ಶೇಕ್ ಆದರೂ ಅದ್ಭುತವಾಗಿ ಸೆರೆ ಹಿಡಿಯುತ್ತಂತೆ. ನೈಟೋಗ್ರಫಿ ಎಂಬ ವಿಶೇಷ ಆಯ್ಕೆ ಕೂಡ ನೀಡಲಾಗಿದ್ದು, ರಾತ್ರಿಯಲ್ಲಿ ಉತ್ತಮ ಫೋಟೋ ಕ್ಲಿಕ್ ಮಾಡಬಹುದು.
4 / 7
ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್ಫೋನ್ನ ಬೆಲೆ ಎಷ್ಟಿರಬಹುದು ಎಂಬುದು ಬಹಿರಂಗವಾಗಿಲ್ಲ. ಆದರೆ, ಒಟ್ಟು ಎರಡು ಸ್ಟೋರೆಜ್ ಮಾದರಿಯಲ್ಲಿ ಬಿಡುಗಡೆ ಆಗಲಿದೆ. 8GB RAM ಮತ್ತು 128GB ಸ್ಟೋರೇಜ್ ಮತ್ತು 8GB RAM ಮತ್ತು 256GB ಸ್ಟೋರೇಜ್ ಆವೃತ್ತಿಯಲ್ಲಿ ಬರುವ ನಿರೀಕ್ಷೆಯಿದೆ. ಈ ಫೋನಿನ ಬೆಲೆ 30,000 ರೂ. ಇರಬಹುದು ಎನ್ನಲಾಗಿದೆ.
5 / 7
6.7 ಇಂಚಿನ ಸೂಪರ್ ಅಮೊಲೊಡ್ ಡಿಸ್‌ಪ್ಲೇ ಹೊಂದಿರಲಿದೆ. ಸ್ಯಾಮ್‌ಸಂಗ್ ಎಕ್ಸಿನೋಸ್ 1280 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿರಲಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.
6 / 7
ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್ಫೋನ್ನಲ್ಲಿ ದೀರ್ಘ ಸಮಯ ಬಾಳಿಕೆ ಬರುವ 6,000mAh ಸಾಮರ್ಥ್ಯದ ಬ್ಯಾಟರಿ ಇದೆ. ಇದು 25W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಪಡೆದುಕೊಂಡಿದೆ.
7 / 7
ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಬಹುದು. ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾ ಒಳಗೊಂಡಿರಬಹುದು.