ಗೆಳತಿಯ ತುಟಿಗೆ ಮುತ್ತು; ಸೆನ್ಸೇಷನ್ ಸೃಷ್ಟಿ ಮಾಡಿದ ಸಂಯುಕ್ತಾ ಹೆಗಡೆ

Updated on: Jul 05, 2025 | 7:49 AM

ನಟಿ ಸಂಯುಕ್ತಾ ಹೆಗಡೆ ಅವರು ಆಗಾಗ ಏನಾದರೂ ಒಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರ ಫೋಟೋ ಮೂಲಕ ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಅವರ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿದೆ.

1 / 5
ನಟಿ ಸಂಯುಕ್ತಾ ಹೆಗಡೆ ಅವರು ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡುತ್ತಲೇ ಇರುತ್ತಾರೆ. ಒಂದಲ್ಲಾ ಒಂದು ವಿಚಾರಕ್ಕೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಆಗುತ್ತಾರೆ. ಈಗ ಅವರ ಫೋಟೋ ಒಂದು ವೈರಲ್ ಆಗಿ ಗಮನ ಸೆಳೆದಿದೆ.

ನಟಿ ಸಂಯುಕ್ತಾ ಹೆಗಡೆ ಅವರು ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡುತ್ತಲೇ ಇರುತ್ತಾರೆ. ಒಂದಲ್ಲಾ ಒಂದು ವಿಚಾರಕ್ಕೆ ಅವರು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಆಗುತ್ತಾರೆ. ಈಗ ಅವರ ಫೋಟೋ ಒಂದು ವೈರಲ್ ಆಗಿ ಗಮನ ಸೆಳೆದಿದೆ.

2 / 5

ಸಂಯುಕ್ತಾ ಹೆಗಡೆ ಆಪ್ತೆ ಎನಿಸಿಕೊಂಡಿರೋ ಪೂಜಿತಾ ಭಾಸ್ಕರ್ ಎಂಬುವವರ ವಿವಾಹ ಆಗಿದೆ. ಈ ವಿವಾಹಕ್ಕೂ ಮೊದಲು ಸಂಯುಕ್ತಾ ಗೆಳತಿಗೆ ಲಿಪ್ ಟು ಲಿಪ್ ಕಿಸ್ ಕೊಟ್ಟಿದ್ದಾರೆ. ಈ ಫೋಟೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5

ಸಾಮಾನ್ಯವಾಗಿ ನಟಿಯರು ಈ ರೀತಿ ಫೋಟೋ ಹಂಚಿಕೊಂಡಾಗ ಟ್ರೋಲ್ ಆಗೋದು ಸಾಮಾನ್ಯ. ಆದರೆ, ನಟಿ ಇದಕ್ಕೆಲ್ಲ ತಲೆ ಕೆಡಸಿಕೊಂಡಿಲ್ಲ. ಈ ಫೋಟೋ ಪೋಸ್ಟ್ ಮಾಡಿದ್ದೂ ಅಲ್ಲದೆ, ಕಮೆಂಟ್ ಬಾಕ್ಸ್​ನ ಆನ್ ಇಟ್ಟಿದ್ದಾರೆ ಅನ್ನೋದು ವಿಶೇಷ.

4 / 5

ಈ ಫೋಟೋ ನೋಡಿದ ಅನೇಕರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರು ನಟಿಯನ್ನು ಟೀಕಿಸಿದ್ದಾರೆ. ‘ಹಿಂಭಾಗದಲ್ಲಿ ಇರೋ ವರ ಶಾಕ್​ನಲ್ಲಿ ಇದ್ದಾನೆ’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು ‘ಇವರಿಗೆಲ್ಲ ಏನಾಗಿದೆ’ ಎಂದು ಕೇಳಿದ್ದಾರೆ.

5 / 5

ಇನ್ನೂ ಕೆಲವರು ‘ನಿಮ್ಮದೇ ಮದುವೆ ಆಯಿತು ಎಂದುಕೊಂಡೆ. ಪುಣ್ಯ ಹಾಗಲ್ಲ’ ಎಂದು ಕೆಲವರು ಹೇಳಿದ್ದಾರೆ. ಸದ್ಯ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ನಟಿ ಟ್ರೋಲ್​ಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

Published On - 7:31 am, Sat, 5 July 25

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us