- Kannada News Photo gallery Sandalwood actor Abhishek Ambareesh and model Aviva Bidapa engagement pics go viral
Abhishek Ambareesh Engagement: ಮನಮೆಚ್ಚಿದ ಹುಡುಗಿ ಅವಿವಾ ಬಿದ್ದಪ್ಪ ಜತೆ ಅಭಿಷೇಕ್ ಅಂಬರೀಷ್ ನಿಶ್ಚಿತಾರ್ಥ; ಇಲ್ಲಿದೆ ಫೋಟೋ ಗ್ಯಾಲರಿ
Abhishek Ambareesh Engagement Photo: ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ಉಂಗುರ ಬದಲಾಯಿಸಿಕೊಂಡಿದ್ದಾರೆ. ಕೆಲವೇ ಕೆಲವು ಮಂದಿಯ ಸಮ್ಮುಖದಲ್ಲಿ ಎಂಗೇಜ್ಮೆಂಟ್ ಮಾಡಲಾಗಿದೆ.
Updated on: Dec 11, 2022 | 1:49 PM

Sandalwood actor Abhishek Ambareesh and model Aviva Bidapa engagement pics go viral

Sandalwood actor Abhishek Ambareesh and model Aviva Bidapa engagement pics go viral

ಕೆಲವೇ ಕೆಲವು ಮಂದಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ತುಂಬ ಅದ್ದೂರಿಯಾಗಿ ಎಂಗೇಜ್ಮೆಂಟ್ ನಡೆದಿದ್ದು, ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ಅವರು ಉಂಗುರ ಬದಲಾಯಿಸಿಕೊಂಡಿದ್ದಾರೆ.

ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಟ ಯಶ್, ಸಚಿವರಾದ ಆರ್. ಅಶೋಕ್, ಅಶ್ವತ್ಥ ನಾರಾಯಣ್, ಸುಧಾಕರ್ ಸೇರಿದಂತೆ ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ.

ಪುತ್ರನ ಎಂಗೇಜ್ಮೆಂಟ್ ಕುರಿತು ಸುಮಲತಾ ಅಂಬರೀಷ್ ಅವರು ಗೌಪ್ಯತೆ ಕಾಪಾಡಿಕೊಂಡಿದ್ದರು. ಈಗ ಫೋಟೋ ಮತ್ತು ವಿಡಿಯೋಗಳು ಲಭ್ಯವಾಗಿವೆ. ಅಭಿಷೇಕ್ ಹಾಗೂ ಅವಿವಾಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

‘ರಾಕಿಂಗ್ ಸ್ಟಾರ್’ ಯಶ್ ಹಾಗು ರಾಧಿಕಾ ಪಂಡಿತ್ ಅವರು ಈ ಸಮಾರಂಭಕ್ಕೆ ಹಾಜರಿ ಹಾಕಿದ್ದಾರೆ. ನಿಶ್ಚಿತಾರ್ಥ ಮಾಡಿಕೊಂಡ ಬ್ಯೂಟಿಪುಲ್ ಜೋಡಿಗೆ ಯಶ್ ಹಾಗೂ ರಾಧಿಕಾ ಶುಭ ಕೋರಿದ್ದಾರೆ.




