
ಹರಿಪ್ರಿಯಾ-ವಸಿಷ್ಠ ಸಿಂಹ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಈ ಜೋಡಿಗೆ ಅಭಿನಂದನೆ ತಿಳಿಸಲು ಆರಂಭಿಸಿದ್ದಾರೆ.

ಈ ವಿಷಯಕ್ಕೆ ಕುರಿತಂತೆ ಹರಿಪ್ರಿಯಾ ಅವರಾಗಲೀ, ವಸಿಷ್ಠ ಸಿಂಹ ಅವರಾಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದಷ್ಟು ಬೇಗ ಅವರು ಮೌನ ಮುರಿಯಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.

ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿಯ ಕೆಲವು ಸೋಶಿಯಲ್ ಮೀಡಿಯಾ ಪೋಸ್ಟ್ ಗಮನಿಸಿದರೆ ಗುಮಾನಿ ಬಲವಾಗುತ್ತಿದೆ. ಇಬ್ಬರೂ ಪರಸ್ಪರ ಪಾರ್ಟ್ನರ್ ಎಂದು ಕರೆದುಕೊಂಡಿದ್ದಾರೆ.

ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಮಾತು ಗಾಂಧಿನಗರದಲ್ಲಿ ಹಬ್ಬಿದೆ.

ಚಿತ್ರರಂಗದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರಿಗೆ ಸಖತ್ ಬೇಡಿಕೆ ಇದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಹಲವು ಚಿತ್ರಗಳು ಅವರ ಕೈಯಲ್ಲಿವೆ.