
ತಾಯಿಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ ಸ್ಯಾಂಡಲ್ವುಡ್ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಮಿಂಚಿರುವ ನಟಿ ಪ್ರಣಿತಾ ಸುಭಾಷ್.

ತಾಯ್ತನದ ಸಂಭ್ರಮವನ್ನು ಎಂಜಾಯ್ ಮಾಡುತ್ತಿರುವ ನಟಿ, ಬೇಬಿ ಬಂಪ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಹೊಸ ಫೋಟೋಶೂಟ್ ಮಾಡಿಸಿಕೊಂಡಿರುವ ಪ್ರಣಿತಾ, ಕಪ್ಪು ಬಣ್ಣದ ಡ್ರೆಸ್ನಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ರಣಿತಾ ಸುಭಾಷ್ ಹಂಚಿಕೊಂಡ ಫೋಟೋಗಳು ಇಲ್ಲಿವೆ.

29 ವರ್ಷದ ಪ್ರಣಿತಾ ಕನ್ನಡದ ‘ಪೊರ್ಕಿ’ ಚಿತ್ರದ ಮೂಲಕ ಪದಾರ್ಪಣೆ ಮಾಡಿದ್ದರು. ನಂತರ ಹಲವು ಹಿಟ್ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ಹಿಂದಿ ಹಾಗೂ ತೆಲುಗು ಚಿತ್ರರಂಗದಲ್ಲಿ ನಟಿ ಸಕ್ರಿಯರಾಗಿದ್ದಾರೆ.

ಪ್ರಣಿತಾ ನಟಿಸಿದ ಕೊನೆಯ ಚಿತ್ರ ‘ಭುಜ್: ದಿ ಪ್ರೈಡ್ ಆಫ್ ಇಂಡಿಯಾ’ 2021ರಲ್ಲಿ ತೆರೆ ಕಂಡಿತ್ತು.

ನಂತರ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ಪ್ರಣಿತಾ, ಪ್ರಸ್ತುತ ಕುಟುಂಬಕ್ಕಾಗಿ ಸಮಯ ಮೀಸಲಿಟ್ಟಿದ್ದಾರೆ. ಇದೀಗ ಮಗುವಿನ ಆಗಮನವನ್ನು ಕಾಯುತ್ತಿದ್ದಾರೆ.