Updated on: Jun 26, 2023 | 7:00 AM
ನಟಿ ರಾಗಿಣಿ ದ್ವಿವೇದಿ ಅವರು ಸೋಶಿಯಲ್ ಮೀಡಿಯಾದಲ್ಲಿ ತುಂಬ ಆ್ಯಕ್ತೀವ್ ಆಗಿದ್ದಾರೆ. ತಮ್ಮ ಅಭಿಮಾನಿಗಳಿಗಾಗಿ ಅವರು ಆಗಾಗ ಫೋಟೋ ಹಂಚಿಕೊಳ್ಳುತ್ತಾರೆ.
ಈಗ ರಾಗಿಣಿ ದ್ವಿವೇದಿ ಅವರು ಒಂದಷ್ಟು ಸ್ಪೆಷಲ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಸುಂದರವಾದ ಹೂವಿನ ಗಿಡಗಳ ಮಧ್ಯದಲ್ಲಿ ರಾಗಿಣಿ ದ್ವಿವೇದಿ ಕುಳಿತಿದ್ದಾರೆ. ಸಖತ್ ಖುಷಿಯಿಂದ ಅವರು ಪೋಸ್ ನೀಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.
ಇನ್ಸ್ಟಾಗ್ರಾಮ್ನಲ್ಲಿ ರಾಗಿಣಿ ದ್ವಿವೇದಿ ಅವರನ್ನು 6 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಈ ಫೋಟೋಗೆ ಸಾವಿರಾರು ಜನರು ಲೈಕ್ ಮಾಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ರಾಗಿಣಿ ಅವರು ತುಪ್ಪದ ಬೆಡಗಿ ಅಂತಲೇ ಫೇಮಸ್. ಹಲವು ಸಿನಿಮಾಗಳಲ್ಲಿ ನಟಿಸಿರುವ ಅವರು ತಮ್ಮದೇ ಅಭಿಮಾನಿ ಬಳಗ ಹೊಂದಿದ್ದಾರೆ.
ರಾಗಿಣಿ ದ್ವಿವೇದಿ ಅವರು ಅನೇಕ ಪ್ರಾಜೆಕ್ಟ್ಗಳಲ್ಲಿ ಬ್ಯುಸಿ ಆಗಿದ್ದಾರೆ. ಬೇರೆ ಬೇರೆ ಜಾನರ್ನ ಹೊಸ ಸಿನಿಮಾ ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.
ಹಲವು ಚಿತ್ರಗಳಲ್ಲಿ ರಾಗಿಣಿ ದ್ವಿವೇದಿ ಅವರು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಮಹಿಳಾ ಪ್ರಧಾನ ಚಿತ್ರಗಳಲ್ಲೂ ಕೂಡ ನಟಿಸುವ ಮೂಲಕ ಅವರು ಗಮನ ಸೆಳೆದಿದ್ದಾರೆ.