- Kannada News Photo gallery Sandalwood stars take part in 78th Independence Day celebration Entertainment News in Kannada
Photo Gallery: 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾದ ಸ್ಯಾಂಡಲ್ವುಡ್ ತಾರೆಯರು
ದೇಶದೆಲ್ಲೆಡೆ ಇಂದು (ಆಗಸ್ಟ್ 15) ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ. ದೇಶಕ್ಕಾಗಿ ಹೋರಾಡಿದ, ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಲಾಗಿದೆ. ಶಾಲೆ, ಕಾಲೇಜು, ಸರ್ಕಾರಿ ಕಚೇರಿ ಮುಂತಾದೆಡೆ ಧ್ವಜಾರೋಹಣ ಮಾಡಲಾಗಿದೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಆ ಫೋಟೋಗಳು ಇಲ್ಲಿವೆ...
Updated on: Aug 15, 2024 | 8:51 PM

ನಟ ರಿಷಬ್ ಶೆಟ್ಟಿ ಅವರು ಕೆರಾಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಈಗಾಗಲೇ ಅವರು ಈ ಶಾಲೆಯನ್ನು ದತ್ತು ಪಡೆದುಕೊಂಡು ಅದರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗೆ ಬೇಕಾದ ಮೂಲ ಸೌಕರ್ಯಗಳನ್ನು ಅವರು ನೀಡುತ್ತಿದ್ದಾರೆ.

‘ನವರಸ ನಾಯಕ’ ಜಗ್ಗೇಶ್ ಅವರು ಕೂಡ ಇಂದು ಧ್ವಜಾರೋಹಣದಲ್ಲಿ ಭಾಗಿಯಾಗಿದ್ದಾರೆ. ಭಾರತಾಂಬೆಯ ಫೋಟೋಗೆ ಅವರು ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ ಅವರು ತ್ರಿವರ್ಣ ಧ್ವಜಕ್ಕೆ ಸೆಲ್ಯೂಟ್ ಮಾಡಿದ್ದಾರೆ. ಬಹಳ ಸಂಭ್ರಮದಿಂದ ಅವರು ಸ್ವಾತಂತ್ರ್ಯೋತ್ಸವ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಮಾನಿಗಳಿಗೆ ಸೋಶಿಯಲ್ ಮೀಡಿಯಾ ಮೂಲಕ ಈ ದಿನದ ಶುಭಾಯಗಳನ್ನು ತಿಳಿಸಿದ್ದಾರೆ.

ನಟಿ ರಾಧಿಕಾ ಕುಮಾರಸ್ವಾಮಿ ಅವರು ರಾಷ್ಟ್ರ ಧ್ವಜವನ್ನು ಹಿಡಿದು ಸಂಭ್ರಮಿಸಿದ್ದಾರೆ. 78ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅವರು ಈ ಫೋಟೋ ಶೇರ್ ಮಾಡಿದ್ದಾರೆ. ಸಿನಿಮಾಗಳ ಆಯ್ಕೆಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ತುಂಬ ಚ್ಯೂಸಿ ಆಗಿದ್ದಾರೆ.


‘ರಾಕಿಂಗ್ ಸ್ಟಾರ್’ ಯಶ್ ಅವರು ಸೋಶಿಯಲ್ ಮೀಡಿಯಾ ಮೂಲಕ ಎಲ್ಲರಿಗೂ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಮುಂಬರುವ ಪೀಳಿಗೆಗೆ ಇದು ಸ್ಫೂರ್ತಿಯಾಗಲಿ ಎಂದು ಅವರು ಹಾರೈಸಿದ್ದಾರೆ. ‘ಟಾಕ್ಸಿಕ್’ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ.

ಕಿರುತೆರೆಯ ಜನಪ್ರಿಯ ನಟಿ ದೀಪಿಕಾ ದಾಸ್ ಅವರು ಕೂಡ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಧ್ವಜಾರೋಹಣ ಮಾಡಿದ ಫೋಟೋ ಹಂಚಿಕೊಂಡಿದ್ದಾರೆ. ದೇಶದ ಸಮೃದ್ಧ ಭವಿಷ್ಯಕ್ಕಾಗಿ ಕೆಲಸ ಮಾಡೋಣ ಎಂದು ದೀಪಿಕಾ ದಾಸ್ ಅವರು ಪೋಸ್ಟ್ ಮಾಡಿದ್ದಾರೆ.




