ನಟಿ ಸಂಗೀತಾ ಭಟ್ ಅವರು ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಚಿತ್ರಗಳಲ್ಲೂ ಅವರು ಬಣ್ಣ ಹಚ್ಚಿದ್ದರು. ಈಗ ಅವರು ನಾಯಕಿಯಾಗಿ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.
1 / 6
ಡಾಲಿ ಧನಂಜಯ ನಟನೆಯ ‘ಎರಡನೇ ಸಲ’ ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಈ ಚಿತ್ರದಿಂದ ಸಂಗೀತಾ ಅವರ ಖ್ಯಾತಿ ಹೆಚ್ಚಿತು. ನಂತರ ಕೆಲವು ಚಿತ್ರಗಳಲ್ಲಿ ಬಣ್ಣ ಹಚ್ಚಿದರು. ಆ ಬಳಿಕ ವೈವಾಹಿಕ ಬದುಕನ್ನು ಆರಂಭಿಸಿದರು. ಈಗ ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.
2 / 6
‘ರೂಪಾಂತರ’ ಶೀರ್ಷಿಕೆಯ ಚಿತ್ರದಲ್ಲಿ ಸಂಗೀತಾ ಭಟ್ ನಟಿಸುತ್ತಿದ್ದಾರೆ. ಈಗಾಗಲೇ ಬಹುತೇಕ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದ್ದು, ಕೊನೆಯ ಹಂತದ ಚಿತ್ರೀಕರಣ ಪ್ರಗತಿಯಲ್ಲಿದೆ.
3 / 6
ಕಿಶೋರ್ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರ ಜತೆಗೆ ಇರುವ ಫೋಟೋಗಳನ್ನು ಸಂಗೀತಾ ಹಂಚಿಕೊಂಡಿದ್ದಾರೆ. ಸಿನಿಮಾದ ಫೋಟೋಗಳು ಹಳ್ಳಿ ಬ್ಯಾಕ್ಗ್ರೌಂಡ್ನಲ್ಲಿ ಇದ್ದು, ಸಿನಿಮಾದ ಕಥೆ ಕೂಡ ಹಾಗೆಯೇ ಸಾಗಲಿದೆ ಎನ್ನಲಾಗುತ್ತಿದೆ.
4 / 6
ಶ್ರೀನಿವಾಸ್ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ರಮೇಶ್ ರಾಜ್ ಛಾಯಾಗ್ರಹಣ ಚಿತ್ರಕ್ಕೆ ಇದೆ.
5 / 6
ಶೀಘ್ರವೇ ಸಿನಿಮಾ ಬಗ್ಗೆ ಮತ್ತೊಂದಷ್ಟು ಮಾಹಿತಿಯನ್ನು ಅವರು ನೀಡಲಿದ್ದಾರೆ.