Updated on: Jan 18, 2024 | 11:01 PM
‘ಮತ್ತೆ-ಮತ್ತೆ’ ಹೆಸರಿನ ಸಿನಿಮಾ ಕನ್ನಡದಲ್ಲಿ ಬರುತ್ತಿದ್ದು, ಸಿನಿಮಾ ಮಾಡಲು ಹೊರಟ ಐವರು ವಿದ್ಯಾರ್ಥಿಗಳ ಸುತ್ತ ನಡೆಯುವ ಕಥೆ ಹೊಂದಿದ ಚಿತ್ರ ಇದು.
ಹಿರಿಯ ನಟ ಉಮೇಶ್, ಮನೆ ಓನರ್ ಪಾತ್ರದಲ್ಲಿ ನಟಿಸಿದ್ದು, ಸಂಜನಾ ಗಲ್ರಾನಿ ಜೊತೆ ಹಾಡೊಂದಕ್ಕೆ ಡ್ಯಾನ್ಸ್ ಮಾಡಿದ್ದಾರೆ.
ಮೂಲತ: ಲೆಕ್ಚರರ್ ಆದ ಡಾ.ಅರುಣ್ ಹೊಸಕೊಪ್ಪ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಸಹ ಮಾಡಿದ್ದಾರೆ. ಈ ಸಿನಿಮಾಕ್ಕೆ ಕತೆಯೇ ಹೀರೋ ಎಂಬುದು ಅವರ ಅಭಿಪ್ರಾಯ.
ಜರ್ನಲಿಸಂ ಮುಗಿಸಿದ 5 ಜನ ವಿದ್ಯಾರ್ಥಿಗಳು ಮುಂದೇನು ಮಾಡಬೇಕು ಅಂತ ಯೋಚಿಸಿ ನಂತರ ಅವರೆಲ್ಲ ಸೇರಿ ಸಿನಿಮಾವೊಂದನ್ನು ನಿರ್ಮಿಸುವ ಕತೆ ಈ ಸಿನಿಮಾದ್ದು.
ಈ ಸಿನಿಮಾದಿಂದ ಬರುವ ಲಾಭದಲ್ಲಿ ಶೇ.25ರಷ್ಟು ಹಣವನ್ನು ಬಡ ಕಲಾವಿದರಿಗೆ ಕೊಡಬೇಕು ಎಂದುಕೊಂಡಿದ್ದೇನೆ ಎಂದಿದ್ದಾರೆ ಸಿನಿಮಾ ನಿರ್ಮಾಪಕರೂ ಆಗಿರುವ ಡಾ.ಅರುಣ್ ಹೊಸಕೊಪ್ಪ.
ಚಿತ್ರದಲ್ಲಿ ಉಮೇಶಣ್ಣ ಅವರ ಜೊತೆ ಸಿಹಿಕಹಿ ಚಂದ್ರು ಅವರು ಮುಖ್ಯಮಂತ್ರಿಯಾಗೇ ಕಾಣಿಸಿಕೊಂಡಿದ್ದಾರೆ, ಇನ್ನು ಸಂಜನಾ ಗಲ್‌ರಾನಿ ಅವರದು ಚಿಕ್ಕ ಪಾತ್ರವಾದರೂ ಕಥೆಗೆ ತಿರುವು ಕೊಡುತ್ತದಂತೆ.
ಡಿಂಗ್ರಿ ನಾಗರಾಜ್, ಹೊನ್ನವಳ್ಳಿ ಕೃಷ್ಣ, ಶಂಖನಾದ ಅಂಜಿನಪ್ಪ, ಪ್ರಕಾಶ್ ತುಮ್ಮಿನಾಡ್, ಶ್ರೀನಿವಾಸ್‌ಗೌಡ, ವೈಷ್ಣವಿ ಮೆನನ್, ತುಮಕೂರು ಮೋಹನ್ ಅವರುಗಳು ಸಿನಿಮಾದಲ್ಲಿದ್ದಾರೆ.
ಬೆಂಗಳೂರು, ನೆಲಮಂಗಲ, ಮುರುಡೇಶ್ವರ, ಶಿರಾಲಿ ಹೀಗೆ ಹಲವಾರು ಲೊಕೇಶನ್‌ಗಳಲ್ಲಿ 50 ದಿನಗಳವರೆಗೆ ಚಿತ್ರೀಕರಣ ನಡೆಸಲಾಗಿದೆ. ಸಿನಿಮಾ ನಾಳೆ (ಜನವರಿ 19) ಬಿಡುಗಡೆ ಆಗಲಿದೆ.
Published On - 11:00 pm, Thu, 18 January 24