Sanjjanaa Galrani: ಗಂಡನ ಮನೆಯಲ್ಲಿ ಬಕ್ರೀದ್​ ಆಚರಿಸಿದ ನಟಿ ಸಂಜನಾ ಗಲ್ರಾನಿ; ಇಲ್ಲಿದೆ ಗ್ಯಾಲರಿ

Updated on: Jun 29, 2023 | 12:05 PM

Bakrid 2023: ನಟಿ ಸಂಜನಾ ಗಲ್ರಾನಿ ಅವರು ಬಹಳ ಖುಷಿಯಿಂದ ಬಕ್ರೀದ್​ ಹಬ್ಬ ಆಚರಿಸಿದ್ದಾರೆ. ಈ ಪ್ರಯುಕ್ತ ಕೆಲವು ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

1 / 7
ನಟಿ ಸಂಜನಾ ಗಲ್ರಾನಿ ಅವರು ಈಗ ಇಸ್ಲಾಂ ಧರ್ಮವನ್ನು ಪಾಲಿಸುತ್ತಿದ್ದಾರೆ. ಪ್ರತಿ ಹಬ್ಬವನ್ನೂ ಅವರು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಿದ್ದಾರೆ.

ನಟಿ ಸಂಜನಾ ಗಲ್ರಾನಿ ಅವರು ಈಗ ಇಸ್ಲಾಂ ಧರ್ಮವನ್ನು ಪಾಲಿಸುತ್ತಿದ್ದಾರೆ. ಪ್ರತಿ ಹಬ್ಬವನ್ನೂ ಅವರು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಿದ್ದಾರೆ.

2 / 7

ಮದುವೆ ಬಳಿಕ ಸಂಜನಾ ಗಲ್ರಾನಿ ಅವರಿಗೆ ಇಸ್ಲಾಂ ಧರ್ಮದಲ್ಲಿ ನಂಬಿಕೆ ಮೂಡಿದೆ. ಅದನ್ನು ಅವರು ಈಗಾಗಲೇ ಹೇಳಿಕೊಂಡಿದ್ದಾರೆ.

3 / 7

ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ ಸಂಜನಾ ಗಲ್ರಾನಿ ಅವರು ಈಗ ಸಂಸಾರದ ಕಡೆಗೆ ಗಮನ ಹರಿಸುತ್ತಿದ್ದಾರೆ.

4 / 7

ಗಂಡನ ಮನೆಯಲ್ಲಿ ಸಂಜನಾ ಗಲ್ರಾನಿ ಅವರು ಬಕ್ರೀದ್​ ಹಬ್ಬ ಆಚರಿಸಿದ್ದಾರೆ. ಈ ಪ್ರಯುಕ್ತ ಕೆಲವು ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

5 / 7

ಸೋಶಿಯಲ್​ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಸಖತ್​ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ.

6 / 7

ಸಂಜನಾ ಗಲ್ರಾನಿ ಅವರು ಇತ್ತೀಚೆಗೆ ಮೆಕ್ಕಾ, ಮದೀನಾಗೆ ತೆರಳಿದ್ದರು. ಆಗಲೂ ಅವರು ಸೋಶಿಯಲ್​ ಮೀಡಿಯಾ ಮೂಲಕ ಮಾಹಿತಿ ನೀಡಿದ್ದರು.

7 / 7

ಕಳೆದ ವರ್ಷ ಸಂಜನಾ ಅವರು ಗಂಡು ಮಗುವಿಗೆ ಜನ್ಮ ನೀಡಿದರು. ಗಂಡ ಮತ್ತು ಮಗನ ಜೊತೆಗಿನ ಫೋಟೋ ಹಾಗೂ ವಿಡಿಯೋಗಳು ವೈರಲ್​ ಆಗಿದೆ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us