
ನವರಾತ್ರಿ ಹಬ್ಬದ ಪ್ರಯುಕ್ತ ನಟಿ ಸಂಜನಾ ಗಲ್ರಾನಿ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ದುರ್ಗಾ ಮಾತೆಯ ವೇಷ ಧರಿಸಿ ಅವರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸುವುದರ ಜೊತೆಯಲ್ಲಿ ಈ ಹೊಸ ಫೋಟೋಗಳನ್ನು ಸಂಜನಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವುಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಸಂಜನಾಗೆ ನವರಾತ್ರಿ ಹಬ್ಬ ಎಂದರೆ ಎಲ್ಲಿಲ್ಲದ ಸಂಭ್ರಮ. ತಮ್ಮ ಬಾಲ್ಯದ ದಿನಗಳನ್ನು ಅವರು ನೆನಪು ಮಾಡಿಕೊಂಡಿದ್ದಾರೆ. ಚಿಕ್ಕವರಾಗಿದ್ದಾಗ ಹಬ್ಬವನ್ನು ಎಂಜಾಯ್ ಮಾಡುತ್ತಿದ್ದ ರೀತಿಯನ್ನು ಅವರು ಮೆಲುಕು ಹಾಕಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸಂಜನಾ ಗಲ್ರಾನಿ ಆ್ಯಕ್ಟೀವ್ ಆಗಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು 11 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಸಾವಿರಾರು ಜನರು ಈ ಫೋಟೋಗಳನ್ನು ಲೈಕ್ ಮಾಡಿದ್ದಾರೆ.

ಇತ್ತೀಚೆಗೆ ಸಂಜನಾ ಅವರು ಕ್ಯಾಬ್ ಚಾಲಕನ ಜೊತೆ ವಿವಾದ ಮಾಡಿಕೊಂಡಿದ್ದರು. ತಮ್ಮನ್ನು ಬೇರೆ ದಾರಿಯಲ್ಲಿ ಚಾಲಕ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ಸಂಜನಾ ಗಾಬರಿಗೊಂಡಿದ್ದರು.