- Kannada News Photo gallery Sankranti 2023: Sandalwood actress Ragini Dwivedi photoshoot in traditional look
Sankranti 2023: ಸಂಕ್ರಾಂತಿ ಸಂಭ್ರಮದಲ್ಲಿ ರಾಗಿಣಿ ದ್ವಿವೇದಿ; ಫ್ಯಾನ್ಸ್ ಮನ ಸೆಳೆದ ಹೊಸ ಫೋಟೋಶೂಟ್
Ragini Dwivedi Photos: ಸಂಕ್ರಾಂತಿ ಪ್ರಯುಕ್ತ ನಟಿ ರಾಗಿಣಿ ಅವರು ಈ ಫೋಟೋಶೂಟ್ ಮಾಡಿಸಿದ್ದಾರೆ. ಸಾಂಪ್ರದಾಯಿಕ ಲುಕ್ನಲ್ಲಿ ಅವರು ಪೋಸ್ ನೀಡಿದ್ದಾರೆ.
Updated on: Jan 15, 2023 | 3:48 PM

ಎಲ್ಲೆಲ್ಲೂ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಟಿ ರಾಗಿಣಿ ದ್ವಿವೇದಿ ಕೂಡ ಸಡಗರದಿಂದ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ತಮ್ಮ ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಸಂಕ್ರಾಂತಿ ಪ್ರಯುಕ್ತ ರಾಗಿಣಿ ದ್ವಿವೇದಿ ಅವರು ಲಂಗ ದಾವಣಿ ಧರಿಸಿ ಪೋಸ್ ನೀಡಿದ್ದಾರೆ. ಸಾಂಪ್ರದಾಯಿಕ ಗೆಟಪ್ನಲ್ಲಿ ಅವರು ಫೋಟೋಶೂಟ್ ಮಾಡಿಸಿ ಗಮನ ಸೆಳೆದಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಈ ಹೊಸ ಫೋಟೋಗಳನ್ನು ರಾಗಿಣಿ ದ್ವಿವೇದಿ ಅವರು ಶೇರ್ ಮಾಡಿಕೊಂಡಿದ್ದಾರೆ. ಅವರ ಅಭಿಮಾನಿಗಳ ವಲಯದಲ್ಲಿ ಇವು ವೈರಲ್ ಆಗಿವೆ. ಸುಂದರ ಫೋಟೋಗಳಿಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.

ರಾಗಿಣಿ ದ್ವಿವೇದಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಅಪ್ಡೇಟ್ ನೀಡುತ್ತಾ ಇರುತ್ತಾರೆ. ಹೊಸ ಸಿನಿಮಾಗಳ ಬಗ್ಗೆಯೂ ಮಾಹಿತಿ ಹಂಚಿಕೊಳ್ಳುತ್ತಾರೆ.

ಸ್ಯಾಂಡಲ್ವುಡ್ ಮಾತ್ರವಲ್ಲದೇ ಬಾಲಿವುಡ್ನಲ್ಲೂ ರಾಗಿಣಿ ದ್ವಿವೇದಿ ಅವರು ಸಕ್ರಿಯರಾಗಿದ್ದಾರೆ. ಹಿಂದಿ ಸಿನಿಮಾದಲ್ಲಿ ನಟಿಸುತ್ತಿರುವ ಅವರು ಮೊದಲ ಹಂತದ ಶೂಟಿಂಗ್ ಮುಗಿಸಿದ್ದಾರೆ.




