Updated on:Apr 16, 2022 | 10:41 AM
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ಬೆನ್ನಲ್ಲೇ ಆರೋಪಿ ಸ್ಥಾನದಲ್ಲಿದ್ದ ಕೆಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಖಾಸಗಿ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ರಾಜಕೀಯ ಗುದ್ದಾಟಕ್ಕೂ ಕಾರಣವಾಗಿದೆ. ಸಾವಿನ ಸುತ್ತ ಹಲವು ಊಹಾಪೋಹಗಳೂ ಹರಿದಾಡುತ್ತಿದೆ. ಶೇಕಡಾ 40 ರಷ್ಟು ಕಮಿಷನ್ ಆರೋಪದಲ್ಲಿ ಮೃತ ಸಂತೋಷ್ ಅವರ ಹಳೆಯ ವಿವಿಧ ಫೋಟೊಗಳು ವೈರಲ್ ಆಗುತ್ತಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಜೊತೆಗೆ ಕೂಡ ಸಂತೋಷ್ ಪಾಟೀಲ್ ಇರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರೀರಾಮುಲು, ಬಿಎಸ್ ಯಡಿಯೂರಪ್ಪ ಜತೆಗಿನ ಫೋಟೊಗಳು ಇಲ್ಲಿದೆ.
ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗಿದೆ. ಇತ್ತ ಬಿಜೆಪಿ ಕಾರ್ಯಕರ್ತನಿಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಧರಣಿ ನಡೆಸುತ್ತಿದೆ. ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ಮುಂದಾಗಿದೆ. ಕಾಂಗ್ರೆಸ್ ಪ್ರತಿಭಟನೆ ನಡುವೆ ಇದೀಗ ಫೋಟೋ ವೈರಲ್ ಆಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದ ಫೋಟೋಗಳು ಕೂಡ ವೈರಲ್ ಆಗಿವೆ. ಕಳೆದ ಜಿಲ್ಲಾ ಪಂಚಾಯಿತಿ ಚುನಾವಣೆಯ ವೇಳೆ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದರು ಎಂದು ತಿಳಿದುಬಂದಿದೆ. ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿ ಜಿಲ್ಲಾ ಪಂಚಾಯತಿ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದಾರೆ.
ಒಂದೆಡೆ ವಿಪಕ್ಷಗಳ ನಾಯಕರು ಪ್ರತಿಭಟನೆ, ವಿರೋಧ ವ್ಯಕ್ತಪಡಿಸುತ್ತಿದ್ದರೆ ಇತ್ತ ಬಿಜೆಪಿ ನಾಯಕರು, ಕಾಂಗ್ರೆಸ್ ಎಲ್ಲವನ್ನೂ ರಾಜಕೀಯವಾಗಿ, ವೋಟ್ ಬ್ಯಾಂಕ್ಗಾಗಿ ಬಳಸಿಕೊಳ್ಳುತ್ತಿದೆ ಎಂದು ದೂರಿತ್ತು. ಅದು ಕೇವಲ ವಾಟ್ಸಾಪ್ ಸಂದೇಶ, ಪ್ರಿಂಟ್ ಟೆಕ್ಸ್ಟ್ ಎಂದು ಈಶ್ವರಪ್ಪ ಹೇಳಿದ್ದರು. ತಪ್ಪು ಯಾರೇ ಮಾಡಿದ್ದರೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ಬಿಜೆಪಿಯ ಕೆಲ ನಾಯಕರು ಹೇಳಿಕೆ ನೀಡಿದ್ದರು. ಈ ಮಧ್ಯೆ, ಜೆಡಿಎಸ್ ನಾಯಕರು ಪ್ರಕರಣದ ತನಿಖೆಗೆ ಹಾಗೂ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದ್ದರು. ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಜೊತೆಗಿರುವ ಫೋಟೋಗಳು ವೈರಲ್ ಆಗಿದೆ.
ಏಪ್ರಿಲ್ 12 ರಂದು ಮಧ್ಯಾಹ್ನದ ವೇಳೆ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಉಡುಪಿಯ ಖಾಸಗಿ ಲಾಡ್ಜ್ ಒಂದರಲ್ಲಿ ಮೃತಪಟ್ಟಿರುವುದು ತಿಳಿದುಬಂತು. ಜೊತೆಗೆ, ತನ್ನ ಸಾವಿಗೆ ಸಚಿವ ಕೆಎಸ್ ಈಶ್ವರಪ್ಪ ಅವರೇ ಕಾರಣ, ಎಲ್ಲಾ ಆಸೆಗಳನ್ನು ಬದಿಗೊತ್ತಿ ತಾನು ಇಂತಹ ನಿರ್ಧಾರ ಕೈಗೊಂಡಿರುವ ಬಗ್ಗೆ ನೀಡಿರುವ ವಾಟ್ಸಾಪ್ ಸಂದೇಶ ಕೂಡ ಪತ್ತೆಯಾಗಿತ್ತು. ಅಲ್ಲದೆ ಕೆಎಸ್ ಈಶ್ವರಪ್ಪ ಜತೆಗಿನ ಫೋಟೊಗಳು ಈ ಮೊದಲೇ ಹರಿದಾಡಿತ್ತು. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಜೊತೆಗಿನ ಫೋಟೊ ವೈರಲ್ ಆಗಿದೆ.
ಇದು ಆತ್ಮಹತ್ಯೆಯೋ ಕೊಲೆಯೋ ಎಂಬ ಬಗ್ಗೆ ಕುಟುಂಬ ಸದಸ್ಯರು ಸಹಿತ ಹಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆಲ್ಲಾ ಈಶ್ವರಪ್ಪನೇ ನೇರ ಕಾರಣ ಎಂದು ಸಂತೋಷ್ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಇದರಲ್ಲಿ ಇಲಾಖೆಯ ತಪ್ಪಿಲ್ಲ. ಈ ಬಗ್ಗೆ ಮೊದಲೇ ಕೋರ್ಟ್ಗೆ ನಾವು ದೂರು ನೀಡಿದ್ದೆವು. ಇಂತಹ ಗುತ್ತಿಗೆಯನ್ನೇ ಇಲಾಖೆ ನೀಡಿಲ್ಲ ಎಂಬ ಬಗ್ಗೆಯೂ ಮಾಹಿತಿಗಳು ಲಭ್ಯವಾಗಿದ್ದವು. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಜೊತೆಗಿರುವ ಫೋಟೋ ಕೂಡ ಹರಿದಾಡಿದೆ.
Published On - 10:29 am, Sat, 16 April 22