Sanvi Sudeep: ‘ಮತ್ತಷ್ಟು ಬರೋದಿದೆ’; ಕುತೂಹಲ ಮೂಡಿಸಿದ ಸಾನ್ವಿ ಸುದೀಪ್ ಫೋಟೋಶೂಟ್

Updated on: Aug 18, 2023 | 8:44 AM

ಈಗ ಸಾನ್ವಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸುದೀಪ್ ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗಿದ್ದು, ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತದೆ.

1 / 7
ನಟಿ ಸಾನ್ವಿ ಸುದೀಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಲಕ್ಷಾಂತರ ಮಂದಿ ಹಿಂಬಾಲಿಸುತ್ತಾರೆ. ಸುದೀಪ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಅವರು ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

ನಟಿ ಸಾನ್ವಿ ಸುದೀಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಲಕ್ಷಾಂತರ ಮಂದಿ ಹಿಂಬಾಲಿಸುತ್ತಾರೆ. ಸುದೀಪ್ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಅವರು ವಿವಿಧ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

2 / 7

ಸುದೀಪ್​ಗೆ ಸಾನ್ವಿ ಕಂಡರೆ ಎಲ್ಲಿಲ್ಲದ ಪ್ರೀತಿ. ಸಾನ್ವಿಗೂ ಅಷ್ಟೇ ಅಪ್ಪನೇ ಪ್ರಪಂಚ. ಅವರು ಆಗಾಗ ತಂದೆ ಜೊತೆ ಇರುವ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತದೆ.

3 / 7

ಈಗ ಸಾನ್ವಿ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸುದೀಪ್ ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗಿದ್ದು, ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 7

ಸಾನ್ವಿ ಅವರು ಈ ಮೊದಲು ಕೂಡ ಕ್ಯಾಮೆರಾ ಹಾಗೂ ಮೊಬೈನಲ್ಲಿ ಸೆರೆ ಹಿಡಿದ ಫೋಟೋಗಳನ್ನು ಹಂಚಿಕೊಂಡಿದ್ದಿದೆ. ಆದರೆ, ಅವರು ಫೋಟೋಶೂಟ್ ಮಾಡಿಸಿರಲಿಲ್ಲ. ಇದೇ ಮೊದಲ ಬಾರಿಗೆ ಅವರು ಫೋಟೋಶೂಟ್ ಮಾಡಿಸಿದ ಸಂಭ್ರಮದಲ್ಲಿದ್ದಾರೆ.

5 / 7

ಇತ್ತೀಚೆಗೆ ಅವರು ಫೋಟೋಗಳನ್ನು ಹಂಚಿಕೊಂಡಿದ್ದರು. ಇದರಲ್ಲಿ ಸಖತ್ ರಗಡ್ ಆಗಿ ಅವರು ಕಾಣಿಸಿಕೊಂಡಿದ್ದರು. ಕೆಂಪು ಶೇಡ್​​ನಲ್ಲಿ ಈ ಫೋಟೋಗಳು ಮೂಡಿ ಬಂದಿದ್ದವು. ಅವರ ರಗಡ್​ನೆಸ್ ನೋಡಿ ಅನೇಕರಿಗೆ ಇಷ್ಟವಾಗಿದೆ.

6 / 7

ಈಗ ಫೋಟೋಶೂಟ್​ನ ಮೇಕಿಂಗ್ ವಿಡಿಯೋ ಹಂಚಿಕೊಂಡಿದ್ದಾರೆ. ಇದಕ್ಕೆ ‘ಇದು ನನ್ನ ಮೊದಲ ಫೋಟೋಶೂಟ್. ಮತ್ತಷ್ಟು ಬರೋದಿದೆ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ.

7 / 7

ಸಾನ್ವಿ ಅವರು ಚಿತ್ರರಂಗಕ್ಕೆ ಕಾಲಿಡಲಿದ್ದಾರೆಯೇ ಎನ್ನುವ ಕುತೂಹಲ ಅನೇಕರಲ್ಲಿ ಮೂಡಿದೆ. ಆದರೆ, ಇದು ಸದ್ಯಕ್ಕಂತೂ ಅನುಮಾನವೇ. ಈ ಬಗ್ಗೆ ಅವರ ಕಡೆಯಿಂದ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಸುದೀಪ್ ಸದ್ಯ ‘ಕಿಚ್ಚ 46’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

Published On - 8:34 am, Fri, 18 August 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us