
ಚೈತ್ರಾ ಆಚಾರ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಅವರನ್ನು ಹಲವು ಆಫರ್ಗಳು ಹುಡುಕಿ ಬರುತ್ತಿವೆ.

‘ಮಹಿರಾ’ ಚಿತ್ರದ ಮೂಲಕ ಚೈತ್ರಾ ಆಚಾರ್ ಚಿತ್ರರಂಗಕ್ಕೆ ಕಾಲಿಟ್ಟರು. ಈ ಸಿನಿಮಾ ತೆರೆಗೆ ಬಂದಿದ್ದು 2019ರಲ್ಲಿ. ಆ ಬಳಿಕ ಅವರಿಗೆ ಹಲವು ಆಫರ್ಗಳು ಬಂದವು.

ಅದೇ ವರ್ಷ ರಿಲೀಸ್ ಆದ ‘ಆ ದೃಶ್ಯ’ ಚಿತ್ರದಲ್ಲಿ ಚೈತ್ರಾ ಆಚಾರ್ ನಟಿಸಿದ್ದಾರೆ. ನಂತರ ಅವರ ಸಿನಿಮಾ ರಿಲೀಸ್ ಆಗಿದ್ದು 2022ರಲ್ಲಿ.

ಸದ್ಯ ಚೈತ್ರಾ ಆಚಾರ್ ಸಾಲು ಸಾಲು ಸಿನಿಮಾ ಒಪ್ಪಿಕೊಂಡಿದ್ದಾರೆ. ‘ಸ್ಟ್ರಾಬೆರಿ’ ಮೊದಲಾದ ಚಿಗ್ರಗಳು ಅವರ ಕೈಯಲ್ಲಿವೆ. ‘ಟೋಬಿ’ಗೆ ನಾಯಕಿ ಆಗಿದ್ದಾರೆ.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಅವರ ಕರಿಯರ್ನಲ್ಲಿ ಪ್ರಮುಖ ಎನಿಸಿಕೊಂಡಿದೆ. ಈ ಚಿತ್ರದಲ್ಲಿ ಅವರು ಸುರಭಿ ಹೆಸರಿನ ಪಾತ್ರ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಈ ಚಿತ್ರಕ್ಕೆ ಹೀರೋ.

ಚೈತ್ರಾ ಆಚಾರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ.

ಇತ್ತೀಚೆಗೆ ಅವರು ಕಪ್ಪು ಬಣ್ಣದ ಬಟ್ಟೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.