- TV9 Kannada Photo gallery Sapthami Gowda Birthday Here is why This Birthday is very special for Kantara Movie Actress rmd
Sapthami Gowda Birthday: ಈ ವರ್ಷದ ಬರ್ತ್ಡೇ ಸಪ್ತಮಿ ಗೌಡಗೆ ಸಖತ್ ವಿಶೇಷ; ಇಲ್ಲಿದೆ ಕಾರಣ
2022ರಲ್ಲಿ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಸಪ್ತಮಿ ಗೌಡ ಅವರಿಗೆ ಇದ್ದ ಬೇಡಿಕೆ ಹೆಚ್ಚಿತು.
Updated on:Jun 08, 2023 | 9:16 AM

‘ಕಾಂತಾರ’ ಮೂಲಕ ಜನಪ್ರಿಯತೆ ಪಡೆದ ಸಪ್ತಮಿ ಗೌಡ ಅವರಿಗೆ ಇಂದು (ಜೂನ್ 8) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಅವರಿಗೆ ಶುಭಾಶಯ ತಿಳಿಸಿದ್ದಾರೆ.

2022ರಲ್ಲಿ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಸಪ್ತಮಿ ಗೌಡ ಅವರಿಗೆ ಇದ್ದ ಬೇಡಿಕೆ ಹೆಚ್ಚಿತು. ಈ ಕಾರಣಕ್ಕೆ ಸಪ್ತಮಿ ಗೌಡಗೆ ಈ ವರ್ಷ ಬರ್ತ್ಡೇ ವಿಶೇಷ.

2020ರಲ್ಲಿ ರಿಲೀಸ್ ಆದ ‘ಪಾಪ್ಕಾರ್ನ್ ಮಂಕಿ ಟೈಗರ್’ ಸಪ್ತಮಿ ಗೌಡ ನಟನೆಯ ಮೊದಲ ಸಿನಿಮಾ. ಇದಾದ ಬಳಿಕ ಅವರು ನಟಿಸಿದ್ದು ‘ಕಾಂತಾರ’ ಚಿತ್ರದಲ್ಲಿ. ಎರಡನೇ ಚಿತ್ರಕ್ಕೆ ಅವರಿಗೆ ದೇಶಾದ್ಯಂತ ಜನಪ್ರಿಯತೆ ಸಿಕ್ಕಿದೆ.

ಸದ್ಯ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನ ಇದೆ. ಈ ಚಿತ್ರದ ಹೊಸ ಪೋಸ್ಟರ್ ಇಂದು ರಿಲೀಸ್ ಆಗೋ ಸಾಧ್ಯತೆ ಇದೆ.

ಸಪ್ತಮಿ ಗೌಡಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸುಮಾರು 6 ಲಕ್ಷ ಮಂದಿ ಅವರನ್ನು ಹಿಂಬಾಲಿಸುತ್ತಾರೆ.
Published On - 8:46 am, Thu, 8 June 23

ರಾಜೇಶ್ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



