
ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಸತ್ಯ’ ಸೀರಿಯಲ್ನಲ್ಲಿ ದಿವ್ಯಾ ಎಂಬ ಪಾತ್ರ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ. ಈ ಪಾತ್ರದಲ್ಲಿ ನಟಿಸಿರುವ ಪ್ರಿಯಾಂಕಾ ಶಿವಣ್ಣ ಅವರಿಗೆ ಅಭಿಮಾನಿ ಬಳಗ ದೊಡ್ಡದಿದೆ.

ಹಲವು ವರ್ಷಗಳಿಂದ ಕನ್ನಡ ಸೀರಿಯಲ್ ಲೋಕದಲ್ಲಿ ಪ್ರಿಯಾಂಕಾ ಶಿವಣ್ಣ ಸಕ್ರಿಯರಾಗಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿಯ ಚಂದ್ರಿಕಾ ಪಾತ್ರದಿಂದ ಅವರು ಮನೆಮಾತಾದರು. ಕಿರುತೆರೆ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಅವರು ಯಶಸ್ವಿಯಾದರು.

ಧಾರಾವಾಹಿಗಳು ಮಾತ್ರವಲ್ಲದೇ ರಿಯಾಲಿಟಿ ಶೋ ಮೂಲಕವೂ ಪ್ರಿಯಾಂಕಾ ಶಿವಣ್ಣ ಅವರು ಪ್ರೇಕ್ಷಕರಿಗೆ ಹತ್ತಿರವಾದರು. ಬಿಗ್ ಬಾಸ್ ಕನ್ನಡ ಸೀಸನ್ 7ರಲ್ಲಿ ಅವರು ಸ್ಪರ್ಧಿಸಿದ್ದರು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ಅವರು ತಮ್ಮತನದ ಮೂಲಕ ಗಮನ ಸೆಳೆದರು.

ಗೌತಮಿ ಜಾದವ್ ಮತ್ತು ಸಾಗರ್ ಬಿಳಿಗೌಡ ಮುಖ್ಯಭೂಮಿಕೆ ನಿಭಾಯಿಸುತ್ತಿರುವ ‘ಸತ್ಯ’ ಧಾರಾವಾಹಿಯಲ್ಲಿ ಪ್ರಿಯಾಂಕಾ ಶಿವಣ್ಣ ಅವರು ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ.

ಪ್ರಿಯಾಂಕಾ ಶಿವಣ್ಣ ಓರ್ವ ಪ್ರತಿಭಾವಂತ ನಟಿ. ಯಾವ ರೀತಿಯ ಪಾತ್ರ ಕೊಟ್ಟರೂ ಅವರು ನಿಭಾಯಿಸಬಲ್ಲರು ಎಂಬುದು ಈಗಾಗಲೇ ಸಾಬೀತಾಗಿದೆ. ಆ ಕಾರಣದಿಂದ ಅವರು ಕಿರುತೆರೆ ವೀಕ್ಷಕರಿಗೆ ಸಖತ್ ಇಷ್ಟ ಆಗಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಪ್ರಿಯಾಂಕಾ ಶಿವಣ್ಣ ಹೆಚ್ಚು ಆ್ಯಕ್ಟೀವ್ ಆಗಿರುತ್ತಾರೆ. ಆ ಮೂಲಕ ಅವರು ತಮ್ಮ ಅಭಿಮಾನಿಗಳಿಗೆ ಅಪ್ಡೇಟ್ ನೀಡುತ್ತ ಇರುತ್ತಾರೆ. ಶೂಟಿಂಗ್ ಬ್ಯುಸಿ ನಡುವೆಯೂ ಅವರು ಅಭಿಮಾನಿಗಳಿಗಾಗಿ ಸಮಯ ನೀಡುತ್ತಾರೆ.

ಇನ್ಸ್ಟಾಗ್ರಾಮ್ನಲ್ಲಿ ಸದ್ಯ ಪ್ರಿಯಾಂಕಾ ಅವರನ್ನು 3.9 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಬಗೆಬಗೆಯ ರೀಲ್ಸ್ ಮೂಲಕ ಅವರು ಅಭಿಮಾನಿಗಳನ್ನು ರಂಜಿಸುತ್ತಾರೆ. ಹೊಸ ಹೊಸ ಫೋಟೋಶೂಟ್ನಿಂದಲೂ ಅವರು ಗಮನ ಸೆಳೆಯುತ್ತಾರೆ.