
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕೊಠಡಿಗಳು ಶಿಥಿಲಗೊಂಡಿದೆ.

1 ರಿಂದ 8 ನೇ ತರಗತಿ ಒಟ್ಟು 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿರುವ ಈ ಶಾಲೆಯಲ್ಲಿ ಬಡವರ ಮಕ್ಕಳು, ರೈತರ ಮಕ್ಕಳೇ ಹೆಚ್ಚಿದ್ದಾರೆ.

ಆದರೆ, 300ಕ್ಕೂ ಅಧಿಕ ಮಕ್ಕಳಿರುವ ಈ ಶಾಲೆಗೆ ಕನಿಷ್ಠ ಮೂಲಭೂತ ಸೌಕರ್ಯಗಳು ಕೂಡ ಇಲ್ಲ.

ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. 1 ರಿಂದ 8 ನೇ ತರಗತಿವರಗೆ ಕೇವಲ ನಾಲ್ಕು ಕೊಠಡಿಗಳು ಇವೆ.

ಸದ್ಯ, ಇರುವ ಕೊಠಡಿಗಳು ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಕುಸಿದು ಬೀಳುವ ಹಂತದಲ್ಲಿವೆ.

ಕೊಠಡಿಗಳ ಕೊರತೆಯಿಂದ ಹಾಗೂ ಇರುವ ಕೊಠಡಿಗಳು ಶಿಥಿಲಗೊಂಡ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಿಕ್ಷಕರು ಮಕ್ಕಳಿಗೆ ಬಯಲಲ್ಲಿ ಪಾಠ ಮಾಡುತ್ತಿದ್ದಾರೆ.

ಈ ಶಾಲೆಯಲ್ಲಿ ನಾಲ್ಕು ಸರ್ಕಾರಿ ಶಿಕ್ಷಕರು ಹಾಗೂ ಆರು ಅತಿಥಿ ಶಿಕ್ಷಕರು ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ.

ಮೇಲಾಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಈ ಬಗ್ಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸೂಕ್ತ ಕೊಠಡಿಗಳ ವ್ಯವಸ್ಥೆ ಮಾಡಿಕೊಡಿ ಎಂದು ವಿದ್ಯಾರ್ಥಿಗಳು ಮನವಿ ಮಾಡುತ್ತಿದ್ದಾರೆ.