Kannada News Photo gallery See photos Crores of rupees cash and Gold seized by IT Raid Across Bangalore and Mysuru
IT Raid: ಅಬ್ಬಾ… ಐಟಿ ದಾಳಿ ವೇಳೆ ಸಿಕ್ಕಿತು ಎಷ್ಟೊಂದು ಹಣ! ಚಿತ್ರಗಳಲ್ಲಿ ನೋಡಿ
ಬೆಂಗಳೂರು ಹಾಗೂ ಮೈಸೂರು ನಗರದ ಹಲವೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟ್ಯಂತರ ರೂಪಾಯಿ ನಗದು, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಸಿಕ್ಕ ಕಂತೆ ಕಂತೆ ಹಣ ಹಾಗೂ ಇತರ ವಸ್ತುಗಳನ್ನು ಚಿತ್ರಗಳಲ್ಲಿ ನೋಡಿ.
ಬೆಂಗಳೂರು ಹಾಗೂ ಮೈಸೂರು ನಗರದ ಹಲವೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟ್ಯಂತರ ರೂಪಾಯಿ ನಗದು, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
1 / 6
ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಫಂಡ್ ಒದಗಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ದಾಳಿ ನಡೆಸಿದ್ದಾರೆ.
2 / 6
ಸುಮಾರು 20 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ. ಸುಮಾರು 5 ಕೋಟಿ ರೂ. ಬೆಲೆಬಾಳುವ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
3 / 6
ಶಾಂತಿನಗರ, ಕಾಕ್ಸ್ಟೌನ್, ಶಿವಾಜಿನಗರ, ಆರ್ಎಂವಿ ಬಡಾವಣೆ, ಸದಾಶಿವ ನಗರ, ಕುಮಾರಪಾರ್ಕ್ ವೆಸ್ಟ್ ಸೇರಿ ಹಲವು ಕಡೆ ದಾಳಿ ನಡೆಸಲಾಗಿತ್ತು.
4 / 6
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳಿದ್ದು, ಅಕ್ರಮಗಳನ್ನು ತಡೆಯುವುದಕ್ಕಾಗಿ ಚುನಾವಣಾ ಆಯೋಗ ಹದ್ದಿನಕಣ್ಣಿಟ್ಟಿದೆ. ಈ ಮಧ್ಯೆ, ಆದಾಯ ತೆರಿಗೆ ಇಲಾಖೆಯೂ ಹಣಕಾಸು ವಹಿವಾಟುಗಳ ಮೇಲೆ ಸೂಕ್ಷ್ಮ ನಿಗಾ ಇರಿಸಿದೆ.
5 / 6
ಕೆಲವೇ ದಿನಗಳ ಹಿಂದೆ ಮೈಸೂರಿನಲ್ಲಿ ದಾಳಿ ಮಾಡಿದ್ದ ಐಟಿ ಅಧಿಕಾರಿಗಳಿಗೆ ಮನೆಯಂಗಳದಲ್ಲಿದ್ದ ಗಿಡದಲ್ಲಿ ಮಾವಿನ ಹಣ್ಣಿನ ಬಾಕ್ಸ್ ನಲ್ಲಿ ಬಚ್ಚಿಟ್ಟಿದ್ದ ಕಂತೆ ಕಂತೆ ಹಣ ಪತ್ತೆಯಾಗಿತ್ತು.