AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮೋದಿ ಹವಾ ಹೇಗಿತ್ತು? ಪ್ರಧಾನಿ ಸಿಲಿಕಾನ್ ಸಿಟಿ ರೌಂಡ್ಸ್​ ಫೋಟೋಸ್

ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿ, ಹಳದಿ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು. ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ಮತ್ತು ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ ಕೂಡ ನೆರವೇರಿಸಿದರು. ಒಟ್ಟಿನಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಮೋದಿ ಹವಾ ಹೇಗಿತ್ತು ನೋಡಿ.

ಗಂಗಾಧರ​ ಬ. ಸಾಬೋಜಿ
|

Updated on:Aug 10, 2025 | 3:17 PM

Share
ಇಂದು ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಹಳದಿ ಮೆಟ್ರೋ ಮಾರ್ಗ, ಮೂರು ವಂದೇ ಭಾರತ್ ರೈಲು ಮತ್ತು ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಿ ಮೋದಿಯನ್ನು ನೋಡಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು.

1 / 10
ಪ್ರಧಾನಿ ಮೋದಿ ಆಗಮನ ಹಿನ್ನಲೆ ಬೆಂಗಳೂರು ಸಜ್ಜಾಗಿತ್ತು. ಕೆಲ ನಗರಗಳು ಕೇಸರಿಮಯವಾಗಿದ್ದವು. ಸಂಗೊಳ್ಳಿರಾಯಣ್ಣ ಸರ್ಕಲ್ ಬಳಿ ಕಟೌಟ್ ಹಾಕಿ ಕಾರ್ಯಕರ್ತರು ಸ್ವಾಗತ ಕೋರಿದ್ದರು. ಹೆಜ್ಜೆ ಹೆಜ್ಜೆಗೂ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಲಾಗಿತ್ತು.

2 / 10
ಬೆಂಗಳೂರಿಗೆ ಬಂದ ಪ್ರಧಾನಿ ಮೋದಿ ಅವರನ್ನು ಬಿಜೆಪಿ ವಿಪಕ್ಷ ನಾಯಕ ಆರ್​​​ ಅಶೋಕ್​, ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಸೇರಿ ಹಲವರು ಸ್ವಾಗತಿಸಿದರು.

3 / 10
ಇನ್ನು ಪ್ರಧಾನಿ ಮೋದಿ ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಮಹಿಳಾಮಣಿಗಳು ಸೇರಿದಂತೆ ಅಭಿಮಾನಿಗಳು ಮೋದಿ ಕಟೌಟ್ ಹಿಡಿದು ಬಂದಿದ್ದರು.

4 / 10
ವಿಶ್ವನಾಯಕನ ನೋಡಲು ಕಾತುರದಿಂದ ಬೆಂಗಳೂರಿನ ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ನಿಂತ ಜನಸಾಗರ. ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರಿಗೆ ಜಯಘೋಷಗಳೊಂದಿಗೆ ಸ್ವಾಗತ ಕೋರಿದ ಬೆಂಗಳೂರಿನ ಜನತೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಮ್ಮ ಸೋಶಿಯಲ್​ ಮಿಡಿಯಾದಲ್ಲಿ ಬರೆದುಕೊಂಡಿದ್ದಾರೆ.

5 / 10
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ಮೋದಿ ಮೂರು ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದರು.

6 / 10
ಬಳಿಕ ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಿ‌ ಮೋದಿ ಲೋಕಾರ್ಪಣೆಗೊಳಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಾಥ್​ ನೀಡಿದರು. ​

7 / 10
ಆರ್​​.ವಿ. ರೋಡ್​ನಿಂದ ಬೊಮ್ಮಸಂದ್ರವರೆಗಿನ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಅಕ್ಕಪಕ್ಕ ಕುಳಿತು ಸಂಚಾರ ಮಾಡಿದರು.

8 / 10
ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಆಡಿಟೋರಿಯಂನಲ್ಲಿ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.

9 / 10
ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪಂಚಮುಖಿ ಗಣೇಶ ಮೂರ್ತಿ ನೀಡಿದರು.

10 / 10

Published On - 3:08 pm, Sun, 10 August 25