
ಚಾಲಕನ ನಿಯಂತ್ರಣ ತಪ್ಪಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ನಡೆದಿದೆ.

ನಿನ್ನೆ (ಅಕ್ಟೋಬರ್ 24) ತಡರಾತ್ರಿ ಊಟಿಯಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್, ಮೇಲುಕಾಮನಹಳ್ಳಿ ಬಳಿ ಕಾಡಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

. ಪರಿಣಾಮ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರು ಪ್ರಾಣಾಪಾಯರಾಗಿದ್ದಾರೆ.

ಇನ್ನು ಗಾಯಾಳುಗಳಿಗೆ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಊಟಿ ನೋಡಿಕೊಂಡು ಬರುತ್ತಿರುವಾಗ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ಉರುಳಿ ಬಿದ್ದಿದೆ.

ದುರ್ಘಟನೆಯಲ್ಲಿ 24 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.