Updated on:Mar 22, 2023 | 10:30 PM
ನಟಿ ಶಿಲ್ಪಾ ಶೆಟ್ಟಿ ಅವರು ‘ಕೆಡಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಯುಗಾದಿ ಹಬ್ಬದ ಪ್ರಯುಕ್ತ ಅವರ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಸತ್ಯವತಿ ಎಂಬ ಪಾತ್ರಕ್ಕೆ ಅವರು ಬಣ್ಣ ಹಚ್ಚುತ್ತಿದ್ದು, ರೆಟ್ರೋ ಶೈಲಿಯಲ್ಲಿ ಪೋಸ್ಟರ್ ಮೂಡಿಬಂದಿದೆ.
‘ಜೋಗಿ’ ಪ್ರೇಮ್ ಅವರು ‘ಕೆಡಿ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಗೆ ಧ್ರುವ ಸರ್ಜಾ ಹೀರೋ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗುತ್ತಿರುವ ಈ ಸಿನಿಮಾ ಮೇಲೆ ಅಭಿಮಾನಿಗಳು ಸಖತ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
‘ಕೆಡಿ’ ಸಿನಿಮಾದಲ್ಲಿ ರವಿಚಂದ್ರನ್ ಕೂಡ ನಟಿಸುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಪಾತ್ರದ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಈ ಚಿತ್ರದ ಎಲ್ಲ ಪಾತ್ರಗಳ ಗೆಟಪ್ ಕೂಡ ಗಮನ ಸೆಳೆಯುವಂತಿವೆ.
ಶಿಲ್ಪಾ ಶೆಟ್ಟಿ ಅವರು ಕನ್ನಡ ಚಿತ್ರರಂಗದ ಜೊತೆ ನಂಟು ಹೊಂದಿದ್ದಾರೆ. ಈ ಮೊದಲು ‘ಪ್ರೀತ್ಸೋದ್ ತಪ್ಪಾ’, ‘ಒಂದಾಗೋಣ ಬಾ’, ‘ಆಟೋ ಶಂಕರ್’ ಸಿನಿಮಾಗಳಲ್ಲಿ ನಟಿಸಿದ್ದರು. ಈಗ ‘ಕೆಡಿ’ ಚಿತ್ರದ ಮೂಲಕ ಕನ್ನಡಕ್ಕೆ ಕಮ್ಬ್ಯಾಕ್ ಮಾಡುತ್ತಿದ್ದಾರೆ.
ಶಿಲ್ಪಾ ಶೆಟ್ಟಿ ಅವರಿಗೆ ಈಗ 47 ವರ್ಷ ವಯಸ್ಸು. ಈ ಪ್ರಾಯದಲ್ಲೂ ಅವರು ಬಳುಕುವ ಬಳ್ಳಿಯಂತೆ ಕಾಣುತ್ತಾರೆ. ಅಷ್ಟರಮಟ್ಟಿಗೆ ಫಿಟ್ನೆಸ್ ಕಾಪಾಡಿಕೊಂಡಿದ್ದಾರೆ. ಅವರನ್ನು ಮತ್ತೆ ಕನ್ನಡ ಸಿನಿಮಾದಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ.
Published On - 10:30 pm, Wed, 22 March 23