- Kannada News Photo gallery Shimoga tourist spots Restriction in Jog Falls Kuppalli Thyavarekoppa Zoo and Safari view of polling process
ಕರ್ನಾಟಕ ಚುನಾವಣೆ: ಮತದಾನ ಪ್ರಕ್ರಿಯೆ ಹಿನ್ನೆಲೆ ಶಿವಮೊಗ್ಗ ಪ್ರವಾಸಿ ತಾಣಗಳಿಗೆ ನಿರ್ಬಂಧ
ಕರ್ನಾಟಕ ವಿಧಾನಸಭೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿರುವ ವಿವಿಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
Updated on:May 11, 2023 | 4:42 PM

ಕರ್ನಾಟಕ ವಿಧಾನಸಭೆ ಚುನಾವಣೆಗೆ ಒಂದು ರಾತ್ರಿಯಷ್ಟೇ ಬಾಕಿ ಇದೆ. ನಾಳೆ (ಮೇ 10) ಬೆಳಗ್ಗೆ 7ರಿಂದ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದೆ. ಹೀಗಾಗಿ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗುತ್ತಿದೆ. ಶಿವಮೊಗ್ಗದಲ್ಲೂ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಮತದಾನ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ್ ಫಾಲ್ಸ್ಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿ ತಾಣಕ್ಕೂ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯ ಕವಿಶೈಲ, ಕವಿಮನೆ ಹಾಗೂ ಕೊಪ್ಪ ತಾಲೂಕು ಹಿರೇಕೂಡಿಗೆಯ ಕುವೆಂಪು ಜನ್ಮಸ್ಥಳದ ಸ್ಮಾರಕ ಮೇ 10ರಂದು ಬಂದ್ ಮಾಡಲು ಕುವೆಂಪು ಪ್ರತಿಷ್ಠಾನ ಕಾರ್ಯದರ್ಶಿ ಕಡಿದಾಳ ಪ್ರಕಾಶ್ ಸೂಚಿಸಿದ್ದಾರೆ. (ಫೋಟೋ: sanchara.in)

ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪ ಸಿಂಹಧಾಮಕ್ಕೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಮತದಾನ ಹಿನ್ನೆಲೆ ಸಾಗರ ತಾಲೂಕಿನ ಸಿಗಂದೂರು ಕ್ಷೇತ್ರಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ. (ಫೋಟೋ: sanchara.in)
Published On - 4:42 pm, Tue, 9 May 23









