ಕರ್ನಾಟಕ ವಿಧಾನಸಭೆ ಚುನಾವಣೆಗೆ ಒಂದು ರಾತ್ರಿಯಷ್ಟೇ ಬಾಕಿ ಇದೆ. ನಾಳೆ (ಮೇ 10) ಬೆಳಗ್ಗೆ 7ರಿಂದ ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದೆ. ಹೀಗಾಗಿ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗುತ್ತಿದೆ. ಶಿವಮೊಗ್ಗದಲ್ಲೂ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.
1 / 6
ಮತದಾನ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ್ ಫಾಲ್ಸ್ಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
2 / 6
ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿ ತಾಣಕ್ಕೂ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
3 / 6
ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯ ಕವಿಶೈಲ, ಕವಿಮನೆ ಹಾಗೂ ಕೊಪ್ಪ ತಾಲೂಕು ಹಿರೇಕೂಡಿಗೆಯ ಕುವೆಂಪು ಜನ್ಮಸ್ಥಳದ ಸ್ಮಾರಕ ಮೇ 10ರಂದು ಬಂದ್ ಮಾಡಲು ಕುವೆಂಪು ಪ್ರತಿಷ್ಠಾನ ಕಾರ್ಯದರ್ಶಿ ಕಡಿದಾಳ ಪ್ರಕಾಶ್ ಸೂಚಿಸಿದ್ದಾರೆ. (ಫೋಟೋ: sanchara.in)
4 / 6
ಶಿವಮೊಗ್ಗ ತಾಲೂಕಿನ ತ್ಯಾವರೆಕೊಪ್ಪ ಸಿಂಹಧಾಮಕ್ಕೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
5 / 6
ಮತದಾನ ಹಿನ್ನೆಲೆ ಸಾಗರ ತಾಲೂಕಿನ ಸಿಗಂದೂರು ಕ್ಷೇತ್ರಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ. (ಫೋಟೋ: sanchara.in)