- Kannada News Photo gallery Shivamogga Airport inaugurated by pm narendra modi and bs yediyurappa birthday photos
Shivamogga Airport: ಮೊದಲ ಪ್ರಯಾಣಿಕ ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಶಿವಮೊಗ್ಗ ಹೇಗೆ ಸಜ್ಜಾಗಿತ್ತು ಗೊತ್ತಾ? ಇಲ್ಲಿವೆ ವಿಮಾನ ನಿಲ್ದಾಣ ಉದ್ಘಾಟನೆ ಫೋಟೋಗಳು
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಇದೇ ವೇಳೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರ ಹುಟ್ಟುಹಬ್ಬಕ್ಕೆ ವಿಶೇಷ ರೀತಿಯಲ್ಲಿ ಶುಭಾಶಯ ಹೇಳಿದರು.
Updated on: Feb 27, 2023 | 2:45 PM

ಇಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಇಡೀ ಶಿವಮೊಗ್ಗದಲ್ಲಿ ಭರ್ಜರಿ ಪ್ರಿಪರೇಷನ್ ಮಾಡಿಕೊಳ್ಳಲಾಗಿತ್ತು.

ಶಿವಮೊಗ್ಗ ಏರ್ಪೋರ್ಟ್ ಮಲೆನಾಡಿಗರ ದಶಕಗಳ ಕನಸು. ಇಷ್ಟೇ ಅಲ್ಲBSY ಕನಸಿನ ಕೂಸಾಗಿದೆ. ಸತತ ಪ್ರಯತ್ನದ ಮೂಲಕ ಕೊನೆಗೂ ಯಡಿಯೂರಪ್ಪ ಕನಸು ಈಡೇರಿದೆ. ಸೋಗಾನೆ ಗ್ರಾಮದಲ್ಲಿ ಏರ್ಪೋರ್ಟ್ ತಲೆಎತ್ತಿದೆ.

ಶಿವಮೊಗ್ಗಕ್ಕೆ ಮೋದಿ ಆಗಮನ ಹಿನ್ನೆಲೆ ಹೂವಿನ ರಂಗೋಲಿ ಬಿಡಿಸಿ ಸ್ವಾಗತಿಸಲಾಯಿತು.

ಮೋದಿ ಸ್ವಾಗತಕ್ಕೆ ರಸ್ತೆಗಳಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್ಗಳು

ಬೆಳಗ್ಗೆ 11.30ಕ್ಕೆ ಪ್ರಾಧಾನಿ ಮೋದಿ ಸೇನಾ ವಿಮಾನದ ಮೂಲಕ ಶಿವಮೊಗ್ಗಕ್ಕೆ ಬಂದಿಳಿದರು.

ಪ್ರಧಾನಿ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣದ ಮಾದರಿಯನ್ನು ವೀಕ್ಷಿಸಿದ ಕ್ಷಣ. ಈ ವೇಳೆ ಸಿಎಂ ಬೊಮ್ಮಾಯಿ ಕೂಡ ಉಪಸ್ಥಿತರಿದ್ದರು.

ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದ ಬಳಿ ನಿರ್ಮಾಣಗೊಂಡ ನೂತನ ಏರ್ಪೋರ್ಟ್ ಅನ್ನು ಮೋದಿ ಉದ್ಘಾಟಿಸಿದರು. 775 ಎಕರೆ ಭೂಮಿಯಲ್ಲಿ 384 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಂಡಿದೆ.

ಶಿವಮೊಗ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಸ್ಮಾರ್ಟ್ಸಿಟಿ ಕಾಮಗಾರಿ, ಶಿಮುಲ್ ಹಾಲು ಪ್ಯಾಕಿಂಗ್ ಘಟಕ, ಮಾಮ್ ಕೋಸ್ ಆಡಳಿತ ಭವನ, ಶಿಮೊಗ್ಗ-ಶಿಕಾರಿಪುರ, ರಾಣೆಬೆನ್ನೂರು ಹೊಸ ರೈಲು ಮಾರ್ಗಕ್ಕೆ ಚಾಲನೆ ಹಾಗೂ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋಗೆ ಶಿಲಾನ್ಯಾಸ ಮಾಡಿದರು.

ಶಿವಮೊಗ್ಗದಲ್ಲಿ ನೂತನ ಏರ್ಪೋರ್ಟ್ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ನಾರಾಯಣಗೌಡ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಶಿವಮೊಗ್ಗದಲ್ಲಿ ನೂತನ ಏರ್ಪೋರ್ಟ್ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ಸಾವಿರಾರು ಮಂದಿ

ಶಿವಮೊಗ್ಗದಲ್ಲಿ ನೂತನ ಏರ್ಪೋರ್ಟ್ ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ




