Updated on: Jun 13, 2023 | 3:31 PM
ಇಂದು (ಜೂನ್ 13) ಶಿವರಾಜ್ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಆ ಸಂದರ್ಭದ ಫೋಟೋಗಳು ವೈರಲ್ ಆಗಿವೆ.
ನೂತನ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರಿಗೆ ಶಿವರಾಜ್ಕುಮಾರ್ ಮತ್ತು ಗೀತಾ ಶಿವರಾಜ್ಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಹೂಗುಚ್ಛ ನೀಡುವ ಮೂಲಕ ಶುಭ ಹಾರೈಸಿದ್ದಾರೆ.
ಶಿವರಾಜ್ಕುಮಾರ್ ಅವರ ಸಂಬಂಧಿ ಮಧು ಬಂಗಾರಪ್ಪ ಕೂಡ ಈ ಸಂದರ್ಭದಲ್ಲಿ ಜೊತೆಗಿದ್ದರು. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಡಾ. ರಾಜ್ಕುಮಾರ್ ಕುಟುಂಬದ ಸದಸ್ಯರಿಗೆ ರಾಜಕೀಯ ಮುಖಂಡರ ಜೊತೆಗೆ ನಂಟು ಇದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಲವು ಅಭ್ಯರ್ಥಿಗಳ ಪರವಾಗಿ ಶಿವರಾಜ್ಕುಮಾರ್ ಮತ್ತು ಗೀತಾ ಶಿವರಾಜ್ಕುಮಾರ್ ಪ್ರಚಾರ ಮಾಡಿದ್ದರು.
ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಗೀತಾ ಶಿವರಾಜ್ಕುಮಾರ್ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಿದ್ದರು. ಅವರು ಪ್ರಚಾರ ಮಾಡಿದ ಅನೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಿದರು.