ಗುಮ್ಮಡಿ ನರಸಯ್ಯ ನಿವಾಸಕ್ಕೆ ಭೇಟಿ ನೀಡಿದ ಶಿವರಾಜ್​ಕುಮಾರ್: ಫೋಟೋ ಗ್ಯಾಲರಿ

Updated on: Dec 05, 2025 | 9:22 PM

‘ಗುಮ್ಮಡಿ ನರಸಯ್ಯ’ ಸಿನಿಮಾದ ಮೂಲಕ ಶಿವರಾಜ್​ಕುಮಾರ್ ಅವರು ಹೀರೋ ಆಗಿ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಡಿ.6ರಂದು ಈ ಸಿನಿಮಾದ ಮುಹೂರ್ತ ಸಮಾರಂಭ ನಡೆಯಲಿದ್ದು, ಅದಕ್ಕೂ ಮುನ್ನ ಗುಮ್ಮಡಿ ನರಸಯ್ಯ ನಿವಾಸಕ್ಕೆ ಶಿವಣ್ಣ ಭೇಟಿ ನೀಡಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ.

1 / 5
ಗುಮ್ಮಡಿ ನರಸಯ್ಯ ಅವರ ಮನೆಗೆ ನಟ ಶಿವರಾಜ್​​ಕಮಾರ್ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಗೀತಾ ಶಿವರಾಜ್​​ಕುಮಾರ್ ಕೂಡ ಸಾಥ್ ನೀಡಿದರು. ಈ ಸಂದರ್ಭದ ಫೋಟೋ ಎಲ್ಲ ಕಡೆಗಳಲ್ಲಿ ವೈರಲ್ ಆಗುತ್ತಿದೆ.

ಗುಮ್ಮಡಿ ನರಸಯ್ಯ ಅವರ ಮನೆಗೆ ನಟ ಶಿವರಾಜ್​​ಕಮಾರ್ ಅವರು ಭೇಟಿ ನೀಡಿದ್ದಾರೆ. ಈ ವೇಳೆ ಗೀತಾ ಶಿವರಾಜ್​​ಕುಮಾರ್ ಕೂಡ ಸಾಥ್ ನೀಡಿದರು. ಈ ಸಂದರ್ಭದ ಫೋಟೋ ಎಲ್ಲ ಕಡೆಗಳಲ್ಲಿ ವೈರಲ್ ಆಗುತ್ತಿದೆ.

2 / 5

ಮಾಜಿ ಶಾಸಕ ಗುಮ್ಮಡಿ ನರಸಯ್ಯ ಅವರ ಜೀವನಧಾರಿತ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಅವರು ನಟಿಸಲಿದ್ದಾರೆ. ಗುಮ್ಮಡಿ ನರಸಯ್ಯ ಅವರ ಪಾತ್ರವನ್ನು ಶಿವಣ್ಣ ಮಾಡಲಿದ್ದಾರೆ. ಹಾಗಾಗಿ ಭೇಟಿ ಮಾಡಿದ್ದಾರೆ.

3 / 5

ಶನಿವಾರ (ಡಿಸೆಂಬರ್ 6) ‘ಗುಮ್ಮಡಿ ನರಸಯ್ಯ’ ಸಿನಿಮಾದ ಮುಹೂರ್ತ ಸಮಾರಂಭ ನಡೆಯಲಿದೆ. ಅದಕ್ಕೂ ಮುನ್ನ ಗುಮ್ಮಡಿ ನರಸಯ್ಯ ಅವರ ಕುಟುಂಬವನ್ನು ಶಿವಣ್ಣ ಭೇಟಿಯಾಗಿ ಮಾತುಕಥೆ ನಡೆಸಿದ್ದಾರೆ.

4 / 5

ಆಂಧ್ರ ಪ್ರದೇಶದಲ್ಲಿ ಗುಮ್ಮಡಿ ನರಸಯ್ಯ ಅವರು ಸಾಕಷ್ಟು ಖ್ಯಾತಿ ಹೊಂದಿದ್ದಾರೆ. 5 ಬಾರಿ ಅವರು ಶಾಸಕರಾಗಿ ಆಯ್ಕೆ ಆಗಿದ್ದರು. ತಮ್ಮ ಸರಳ ವ್ಯಕ್ತಿತ್ವ ಕಾರಣದಿಂದ ಅವರು ಎಲ್ಲರಿಗೂ ಮಾದರಿ ಆಗಿದ್ದರು.

5 / 5

ಶಿವರಾಜ್​​ಕುಮಾರ್ ಮುಖ್ಯ ಪಾತ್ರದಲ್ಲಿ ನಟಿಸಲಿರುವ ಮೊದಲ ತೆಲುಗು ಸಿನಿಮಾ ಇದು. ಹಾಗಾಗಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈಗಾಗಲೇ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿದೆ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us