
ನಟ ಶಿವರಾಜ್ಕುಮಾರ್ ಚೆನ್ನೈಗೆ ಭೇಟಿ ನೀಡಿದ್ದಾರೆ. ಈ ವೇಳೆ ರಾಜಭವನಕ್ಕೆ ತೆರಳಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಆಗಿದ್ದಾರೆ. ಈ ಸಂದರ್ಭದ ಫೋಟೋಗಳು ಲಭ್ಯವಾಗಿವೆ.

ಅನೇಕ ಸಿನಿಮಾಗಳಲ್ಲಿ ಶಿವಣ್ಣ ಬ್ಯುಸಿ ಆಗಿದ್ದಾರೆ. ಅದರ ನಡುವೆಯೂ ಬಿಡುವು ಮಾಡಿಕೊಂಡು ಅವರು ತಮಿಳುನಾಡಿಗೆ ತೆರಳಿದ್ದಾರೆ. ವೆಂಕಯ್ಯ ನಾಯ್ಡು ಅವರ ಜತೆ ಕೆಲವು ವಿಷಯಗಳ ಬಗ್ಗೆ ಅವರು ಮಾತುಕತೆ ನಡೆಸಿದ್ದಾರೆ.

ವೆಂಕಯ್ಯ ನಾಯ್ಡು ಮತ್ತು ಶಿವರಾಜ್ಕುಮಾರ್ ಅವರದ್ದು ಸಹಜ ಭೇಟಿ ಎಂದು ಹೇಳಲಾಗುತ್ತಿದೆ. ಭೇಟಿಯ ಉದ್ದೇಶ ಏನು ಎಂಬ ಬಗ್ಗೆ ಶಿವಣ್ಣ ಅಧಿಕೃತ ಹೇಳಿಕೆ ನೀಡಬೇಕಿದೆ.

ಶಿವರಾಜ್ಕುಮಾರ್ ಅವರು ರಾಜಭವನಕ್ಕೆ ಭೇಟಿ ನೀಡಿದ ವೇಳೆ ಅಲ್ಲಿನ ಸಿಬ್ಬಂದಿ ಕೂಡ ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಶಿವಣ್ಣನ ಅಭಿಮಾನಿಗಳ ವಲಯದಲ್ಲಿ ಈ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ.

ಡಾ. ರಾಜ್ಕುಮಾರ್ ಕುಟುಂಬದ ಜೊತೆ ಅನೇಕ ಗಣ್ಯರಿಗೆ ಒಡನಾಟ ಇದೆ. ಹಲವು ರಾಜ್ಯಗಳ ರಾಜಕಾರಣಿಗಳ ಜೊತೆಗೂ ಶಿವಣ್ಣ ಸ್ನೇಹ ಹೊಂದಿದ್ದಾರೆ. ಇತ್ತೀಚೆಗೆ ಅವರು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಿದ್ದರು.