AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhajarangi 2: ಶಿವಣ್ಣನ ‘ಭಜರಂಗಿ 2’ ಚಿತ್ರಕ್ಕೆ ಗ್ರ್ಯಾಂಡ್​ ಓಪನಿಂಗ್​; ಇಲ್ಲಿದೆ ಫೋಟೋ ಗ್ಯಾಲರಿ

Shivarajkumar: ನಟ ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ಎ. ಹರ್ಷ ಕಾಂಬಿನೇಷನ್​ನ ‘ಭಜರಂಗಿ 2’ ಚಿತ್ರವನ್ನು ಸಿನಿಪ್ರಿಯರು​ ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಮುಂಜಾನೆ 5 ಗಂಟೆಗೆ ಶೋ ಆರಂಭ ಆಗಿದೆ.

TV9 Web
| Edited By: |

Updated on: Oct 29, 2021 | 8:29 AM

Share
‘ಭಜರಂಗಿ 2’ ಸಿನಿಮಾವನ್ನು ಬರಮಾಡಿಕೊಳ್ಳಲು ನಿನ್ನೆ ರಾತ್ರಿಯಿಂದಲೇ ಅಭಿಮಾನಿಗಳು ತಯಾರಿ ಮಾಡಿಕೊಂಡಿದ್ದರು. ಥಿಯೇಟರ್​ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಕುಂಬಳಕಾಯಿ ಒಡೆದು ಸಂಭ್ರಮಿಸಿದರು. ಕಟೌಟ್​ಗೆ ಹಾಲಿನ ಅಭಿಷೇಕ ಮಾಡಲಾಯಿತು.

Shivarajkumar starrer Bhajarangi 2 Kannada movie gets grand opening with fans celebration

1 / 7
ಮುಂಜಾನೆಯೇ ಶುರುವಾದ ಫ್ಯಾನ್ಸ್​ ಶೋನಲ್ಲಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದಾರೆ. ಚಿತ್ರ ಪ್ರದರ್ಶನ ಆರಂಭ ಆಗುತ್ತಿದ್ದಂತೆಯೇ ಥಿಯೇಟರ್​ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಯಿತು. ಒಟ್ಟಿನಲ್ಲಿ ಮೊದಲ ದಿನವೇ ‘ಭಜರಂಗಿ 2’ ಧೂಳೆಬ್ಬಿಸಿದೆ.

Shivarajkumar starrer Bhajarangi 2 Kannada movie gets grand opening with fans celebration

2 / 7
ಅಭಿಮಾನಿಗಳ ಜೊತೆ ಸಿನಿಮಾ ನೋಡಲು ಶಿವರಾಜ್​ಕುಮಾರ್​ ಕೂಡ ಚಿತ್ರಮಂದಿರಕ್ಕೆ ಮುಂಜಾನೆಯೇ ಆಗಮಿಸಿದರು. ಅಭಿಮಾನಿಗಳ ಉತ್ಸಾಹ ಕಂಡು ಅವರು ಖುಷಿಪಟ್ಟರು. ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್​ ಸಿಗುತ್ತಿರುವುದು ಇಡೀ ತಂಡದ ಸಂತಸಕ್ಕೆ ಕಾರಣ ಆಗಿದೆ.

3 / 7
ಚಿತ್ರಮಂದಿರಕ್ಕೆ ಬಂದ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ನೆಚ್ಚಿನ ಸ್ಟಾರ್​ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹರಸಾಹಸ ಪಟ್ಟರು. ಶಿವಣ್ಣನಿಗೆ ಜೈಕಾರ ಕೂಗಿ ಸಂಭ್ರಮಿಸಿದರು.

4 / 7
ಜಾನಪದ ತಂಡಗಳನ್ನು ಕರೆಸಿ ನೃತ್ಯ ಮಾಡಿಸಲಾಗಿದೆ. ಈ ಎಲ್ಲ ದೃಶ್ಯಗಳನ್ನು ನೋಡುತ್ತಿದ್ದರೆ ಇದು ಯಾವುದೇ ಹಬ್ಬಕ್ಕೂ ಕಡಿಮೆ ಇಲ್ಲ ಎಂಬುದು ಖಚಿತ. ಹಾಗಾಗಿ ಶಿವಣ್ಣನ ಫ್ಯಾನ್ಸ್​ ಪಾಲಿಗೆ ಇಂದೇ ದೀಪಾವಳಿ ಬಂದಿದೆ.

5 / 7
ಬೆಂಗಳೂರಿನ ಜೆಪಿ ನಗರದ ಸಿದ್ದೇಶ್ವರ ಚಿತ್ರಮಂದಿರ, ಚಿತ್ರದುರ್ಗದ ಪ್ರಸನ್ನ ಥಿಯೇಟರ್​, ದಾವಣಗೆರೆಯ ವಸಂತಾ ಟಾಕೀಸ್​ ಸೇರಿದಂತೆ ಅನೇಕ ಕಡೆಗಳಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

6 / 7
ಸೂರ್ಯೋದಯಕ್ಕೂ ಮುನ್ನವೇ ಕೆಲವು ಕಡೆಗಳಲ್ಲಿ ಸಿನಿಮಾ ಪ್ರದರ್ಶನ ಆರಂಭ ಆಗಿದೆ. ಮುಂಜಾನೆ 5 ಗಂಟೆಗೆ ಫಸ್ಟ್​ ಡೇ ಫಸ್ಟ್​ ಶೋ ಕಣ್ತುಂಬಿಕೊಂಡ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರಕ್ಕೆ ಪಾಸಿಟಿವ್​ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಧರ್ಮಣ್ಣ, ವಸಿಷ್ಠ ಸಿಂಹ ಮುಂತಾದ ಸೆಲೆಬ್ರಿಟಿಗಳು ಬಂದ ಸಿನಿಮಾ ವೀಕ್ಷಿಸಿದ್ದಾರೆ.

7 / 7
TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್