AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರಾವಣ ಬಂತು ನಾಡಿಗೆ: ಧಾರವಾಡ ಮಹಿಳೆಯರಿಂದ ವಿಭಿನ್ನ ನಾಗರ ಪಂಚಮಿ ಆಚರಣೆ: ಬಾಯಲ್ಲಿ ನೀರೂರಿಸುವ ತಿಂಡಿಗಳು

ಧಾರವಾಡದ ಲಕಮನಹಳ್ಳಿ ಪ್ರದೇಶದಲ್ಲಿರುವ ಪ್ರಸಿದ್ಧ ಸೋಮೇಶ್ವರ ದೇವಸ್ಥಾನದಲ್ಲಿ ಇಂದು ದಿ ಡ್ಯಾನ್ಸ್ ಅಕಾಡೆಮಿ ವತಿಯಿಂದ ನಾಗರ ಪಂಚಮಿ ಹಬ್ಬವನ್ನು ಆಯೋಜಿಸಲಾಗಿತ್ತು. ಸಾಂಪ್ರದಾಯಿಕ ಉಡುಗೆ ತೊಟ್ಟ ಮಹಿಳಾ ಮಣಿಗಳು, ಮಕ್ಕಳು ತರಹೇವಾರಿ ಉಂಡಿ, ಚಕ್ಕುಲಿ ತಂದು ಧಾರವಾಡದಲ್ಲಿ ಶ್ರಾವಣ ಮಾಸವನ್ನು ವಿಶೇಷವಾಗಿ ಸ್ವಾಗತಿಸಿದ ಪರಿ ಹೀಗಿದೆ.

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Aug 07, 2024 | 4:17 PM

Share
ಶ್ರಾವಣ ಮಾಸ ಬಂದರೆ ಸಾಕು ಹಬ್ಬಗಳ ಸರಮಾಲೆಯೇ ಶುರುವಾಗುತ್ತದೆ. ಈ ಮಾಸದ ಮೊದಲ ಹಬ್ಬ ನಾಗರ ಪಂಚಮಿ. ಈ ಹಬ್ಬವನ್ನು ಧಾರವಾಡದಲ್ಲಿ ವಿಭಿನ್ನವಾಗಿ ಆಚರಿಸುವ ಮೂಲಕ ಮಹಿಳೆಯರು ಸಂಭ್ರಮಿಸಿದರು. ಸಂಭ್ರಮ, ಸಡಗರದ ಒಂದು ಝಲಕ್​ ಇಲ್ಲಿದೆ ನೋಡಿ.

1 / 7
ಸಾಂಪ್ರದಾಯಿಕ ಉಡುಗೆ ತೊಟ್ಟ ಮಹಿಳೆಯರು, ಮಕ್ಕಳು ತರಹೇವಾರಿ ಉಂಡಿ, ಚಕ್ಕುಲಿ. ಧಾರವಾಡದಲ್ಲಿ ಶ್ರಾವಣ ಮಾಸವನ್ನು ವಿಶೇಷವಾಗಿ ಸ್ವಾಗತಿಸಿದ ಬಗೆ ಇದು.

2 / 7
ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಗೆ ತನ್ನದೇ ಆದ ವಿಶೇಷತೆ ಇದೆ. ದೇವಸ್ಥಾನದಲ್ಲಿರುವ ನಾಗ ಮೂರ್ತಿಗೆ ಹಾಲು ಎರೆಯುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತೆ. ಎಲ್ಲರೂ ಅಂದು ತುಂಬಾನೇ ಬಿಜಿಯಾಗಿರೋದ್ರಿಂದ ಅದಕ್ಕೂ ಒಂದು ದಿನ ಮುಂಚೆಯೇ ಧಾರವಾಡದಲ್ಲಿ ಮಹಿಳೆಯರು ಈ ಹಬ್ಬವನ್ನು ವಿಭಿನ್ನವಾಗಿ ಆಚರಿಸಿದರು.

3 / 7
ಧಾರವಾಡದ ಲಕಮನಹಳ್ಳಿ ಪ್ರದೇಶದಲ್ಲಿರುವ ಪ್ರಸಿದ್ಧ ಸೋಮೇಶ್ವರ ದೇವಸ್ಥಾನದಲ್ಲಿ ನಡೆದ ಈ ಸಂಭ್ರಮದ ಹಬ್ಬದಾಚರಣೆ ವೇಳೆ ಮನೆಯಲ್ಲಿ ತಯಾರಿಸಿ ತಂದಿದ್ದ ಬಗೆ ಬಗೆಯ ಉಂಡಿಗಳನ್ನೂ ಮಹಿಳೆಯರು ಮತ್ತು ಮಕ್ಕಳು ಸವಿದರು. ನಗರದ ನೃತ್ಯ ದಿ ಡ್ಯಾನ್ಸ್ ಅಕಾಡೆಮಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

4 / 7
ನಾಗರ ಪಂಚಮಿ ನಾರಿಯರ ಹಬ್ಬ. ಆದರೆ, ಇತ್ತೀಚಿನ ಯುವ ಪೀಳಿಗೆ ಯಾವ ಹಬ್ಬಗಳನ್ನು ಸಾಂಪ್ರದಾಯಿಕವಾಗಿ ಆಚರಿಸದೇ ನೆಪಕ್ಕೆ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಪೀಳಿಗೆಗೆ ಹಬ್ಬದ ಮಹತ್ವ ತಿಳಿಸಲು ಮಹಿಳೆಯರು ಮಕ್ಕಳೊಂದಿಗೆ ಸೋಮೇಶ್ವರ ದೇವಸ್ಥಾನಕ್ಕೆ ಬಂದು ಆವರಣದಲ್ಲಿ ಬಂದು ಹಬ್ಬದಾಚರಣೆ ಮಾಡಿದರು. ಆ ಮೂಲಕ ಮಕ್ಕಳಿಗೆ ಹಬ್ಬದ ಆಚರಣೆಗಳನ್ನು ತಿಳಿಸಿಕೊಟ್ಟರು.

5 / 7
ಕೇವಲ ಪಂಚಮಿ ಮಾತ್ರವಲ್ಲದೇ ನಮ್ಮ ಹಬ್ಬಗಳನ್ನು ಏಕೆ ಮಾಡಬೇಕು ಅನ್ನೋದ ಬಗ್ಗೆಯೂ ಚರ್ಚೆ ನಡೆಸಲಾಯಿತು. ಬಳಿಕ ಎಲ್ಲರೂ ಒಂದೇ ಕುಟುಂಬದ ಸದಸ್ಯರಾಗಿ ಊಟ, ಮಾಡಿ ಸಂಭ್ರಮಿಸಿದರು.

6 / 7
ಇದೇ ವೇಳೆ ಕ್ಯಾಟ್ ವಾಕ್ ಮಾಡುವ ಮೂಲಕವೂ ಮಹಿಳೆಯರು ಗಮನ ಸೆಳೆದರು. ಬಳಿಕ ಕೆಲವು ಮಹಿಳೆಯರು ನಾಗರ ಪಂಚಮಿಯ ಜಾನಪದ ಹಾಡುಗಳನ್ನು ಹಾಡಿದರೆ ಮತ್ತೆ ಕೆಲವರು ಬಾಲಿವುಡ್ ಹಾಡುಗಳಿಗೆ ಸ್ಟೆಪ್ ಹಾಕಿ ಸಂಭ್ರಮಿಸಿದರು. ಒಟ್ಟಿನಲ್ಲಿ ಶ್ರಾವಣ ಮಾಸದ ಮೊದಲ ಹಬ್ಬ ಧಾರವಾಡದಲ್ಲಿ ಸಂಭ್ರಮವನ್ನು ಮೂಡಿಸಿದ್ದಂತೂ ಸತ್ಯ.

7 / 7
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​

ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ

ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?

ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು

ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?

ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?

ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್

ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ