Shravana Shanivara 2023: ಶ್ರಾವಣದ ಮೊದಲ ಶನಿವಾರ, ರಾಜ್ಯದ ದೇವಾಲಯಗಳಲ್ಲಿ ಭಕ್ತ ಸಾಗರ
ಇಂದಿನಿಂದ ಶ್ರಾವಣ ಮಾಸ ಆರಂಭ ಹಿನ್ನೆಲೆ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು, ಮೈಸೂರು, ತುಮಕೂರು ಸೇರಿದಂತೆ ವಿವಿಧೆಡೆ ಪ್ರಮುಖ ದೇವಸ್ಥಾನಗಳಲ್ಲಿ ಜನ ಸಾಗರವೇ ಹರಿದು ಬರುತ್ತಿದೆ. ಅದರಲ್ಲೂ ಇಂದು ಶ್ರಾವಣ ಮಾಸದ ಮೊದಲ ಶನಿವಾರವಾದ ಕಾರಣ ಹನುಮನ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ.
Updated on:Aug 19, 2023 | 11:40 AM

ಇಂದು ಶ್ರಾವಣದ ಮೊದಲ ಶನಿವಾರ ಹಿನ್ನೆಲೆ ಬೆಂಗಳೂರಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಶ್ರೀನಿವಾಸ ಹಾಗೂ ವೆಂಕಟೇಶ್ವರ ದೇವಸ್ಥಾನಗಳಲ್ಲಿ ಬೆಳ್ಳಗ್ಗೆಯೇ ಪಂಚಾಭಿಷೇಕ ಮಾಡಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗುತ್ತಿದೆ. ಸದ್ಯ ಬೆಳ್ಳಂ ಬೆಳಗ್ಗೆ ಭಕ್ತರು ದೇವರ ದರ್ಶನಕ್ಕಾಗಿ ಕಾಯುತ್ತಿರುವ ದೃಶ್ಯ.

ಮೈಸೂರಿನ ಜಯನಗರ ಬಡಾವಣೆಯ ಶ್ರೀನಿವಾಸ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಶ್ರೀನಿವಾಸನಿಗೆ ಅಭಿಷೇಕ ಮಂಗಳಾರತಿ ಸೇವೆ ಮಾಡಲಾಗುತ್ತಿದ್ದು ದೇವಸ್ಥಾನದ ಒಳಗೆ ಹೊರಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ.

ಇಂದು ಶ್ರಾವಣ ಮಾಸದ ಮೊದಲ ಶನಿವಾರ ಹಿನ್ನೆಲೆ ಚಿತ್ರದುರ್ಗದ ಒನಕೆ ಒಬವ್ವ ಸ್ಟೇಡಿಯಂ ರಸ್ತೆಯಲ್ಲಿನ ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದಲೇ ದೇವರ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ.

ಇಂದು ಮೊದಲ ಶ್ರಾವಣ ಶನಿವಾರ ಹಿನ್ನೆಲೆ ಪ್ರಸಿದ್ಧ ಪಾವಗಡ ಶ್ರೀ ಶನಿಮಹಾತ್ಮ ದೇವಾಲಯದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಬೇರೆ ಬೇರೆ ಜಿಲ್ಲೆ ರಾಜ್ಯಗಳಿಂದ ಅತಿ ಹೆಚ್ಚು ಭಕ್ತಗಣ ಆಗಮಿಸುವ ಹಿನ್ನೆಲೆಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಹಾಗೂ ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಅಲಂಕಾರಗಳನ್ನು ಮಾಡಲಾಗುತ್ತಿದೆ.

ಶ್ರಾವಣ ಶನಿವಾರದಂದು ಹನುಮಂತ ಹಾಗೂ ಶ್ರೀನಿವಾಸನಿಗೆ ವಿಶೇಷ ಪೂಜೆ ಮಾಡಲಾಗುತ್ತೆ. ಹನುಮಂತ ಹಾಗೂ ಶ್ರೀನಿವಾಸನ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರಗಳನ್ನು ಮಾಡಲಾಗುತ್ತೆ.

ಇಂದು ಹನುಮಂತನಿಗೆ ವೀಳ್ಯದೆಲೆಯನ್ನು ಅರ್ಪಿಸಿದರೆ, ಹನುಮಂತನು ನಿಮ್ಮ ಎಲ್ಲಾ ಕೆಲಸಗಳನ್ನು ಸುಲಭ ಮಾಡುತ್ತಾನೆ. ಹನುಮಂತನ ಕೃಪೆ ಸಿಗಲಿದೆ ಎನ್ನುವ ನಂಬಿಕೆಯಿದೆ.

ಶ್ರಾವಣ ಮಾಸದ ಮೊದಲ ಶನಿವಾರ ಹಿನ್ನೆಲೆ ದೇವಸ್ಥಾನಗಳಿಗೆ ಭಕ್ತ ಸಾಗರವೇ ಹರಿದು ಬರುತ್ತಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತಿದೆ.
Published On - 8:26 am, Sat, 19 August 23



















