IND vs SL: 200 ಸ್ಟ್ರೈಕ್ ರೇಟ್‌, 25 ಎಸೆತಗಳಲ್ಲಿ ಅರ್ಧಶತಕ; ಲಂಕಾ ವಿರುದ್ಧ ಶ್ರೇಯಸ್ ಆರ್ಭಟ

Shreyas Iyer: ಟೀಂ ಇಂಡಿಯಾ ಕೊನೆಯ 3 ಓವರ್‌ಗಳಲ್ಲಿ 44 ರನ್ ಗಳಿಸಿತು, ಅದರಲ್ಲಿ ಕೇವಲ 14 ಎಸೆತಗಳಲ್ಲಿ 40 ರನ್ ಗಳಿಸಿದ ಈ ಬ್ಯಾಟ್ಸ್‌ಮನ್ ತಂಡವನ್ನು 199 ಸ್ಕೋರ್‌ಗೆ ಕೊಂಡೊಯ್ದರು.

ಪೃಥ್ವಿಶಂಕರ
|

Updated on: Feb 25, 2022 | 3:15 PM

ಇಶಾನ್ ಕಿಶನ್ ವಿಕೆಟ್ ಪತನವಾದ ಬಳಿಕ ಶ್ರೇಯಸ್ ಏಕಾಂಗಿಯಾಗಿ ದಾಳಿಯ ಹೊಣೆ ಹೊತ್ತುಕೊಂಡರು. ಭಾರತದ ಬಲಗೈ ಬ್ಯಾಟ್ಸ್‌ಮನ್ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದು ಶ್ರೇಯಸ್ ಅವರ ಟಿ20 ವೃತ್ತಿ ಬದುಕಿನ ನಾಲ್ಕನೇ ಅರ್ಧಶತಕವಾಗಿದೆ. ಅವರು ಕೇವಲ 28 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ ಅಜೇಯ 57 ರನ್ ಗಳಿಸಿದರು.

1 / 4
ಲಕ್ನೋದಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳುಹಿಸಲಾಗಿತ್ತು. ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಅವರ ಅದ್ಭುತ ಆರಂಭದ ನಂತರ, ಅಯ್ಯರ್ ಕೂಡ ಬಿರುಸಿನ ಬ್ಯಾಟಿಂಗ್ ಮಾಡಿದರು. ಅಯ್ಯರ್ ಎರಡನೇ ವಿಕೆಟ್‌ಗೆ ಇಶಾನ್ ಜೊತೆ 5 ಓವರ್‌ಗಳಲ್ಲಿ 44 ರನ್ ಸೇರಿಸಿದರು.

2 / 4
ಟಿ20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಭಾರತೀಯ ಬ್ಯಾಟ್ಸ್‌ಮನ್‌ಗಳು ತಮಗೆ ಸಿಗುತ್ತಿರುವ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಪ್ರತಿ ಪಂದ್ಯವೂ ಪ್ರಮುಖವಾಗಿರುವ ಬ್ಯಾಟ್ಸ್‌ಮನ್‌ಗಳಲ್ಲಿ ಶ್ರೇಯಸ್ ಅಯ್ಯರ್ ಕೂಡ ಒಬ್ಬರು. ಶ್ರೀಲಂಕಾ ವಿರುದ್ಧದ T20 ಸರಣಿಯಲ್ಲಿ ಅಯ್ಯರ್ ಅಂತಹ ಒಂದು ಅವಕಾಶವನ್ನು ಪಡೆದರು ಮತ್ತು ಸರಣಿಯ ಮೊದಲ ಪಂದ್ಯದಲ್ಲಿ, ಈ ಬ್ಯಾಟ್ಸ್‌ಮನ್ ಅದ್ಭುತ ಅರ್ಧಶತಕವನ್ನು ಬಾರಿಸುವ ಮೂಲಕ ತಮ್ಮ ಹಕ್ಕು ಸಾಧಿಸಿದರು.

3 / 4
200 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ ಅಯ್ಯರ್ ರವೀಂದ್ರ ಜಡೇಜಾ ಅವರೊಂದಿಗೆ ಕೇವಲ 18 ಎಸೆತಗಳಲ್ಲಿ 44 ರನ್‌ಗಳ ಅಜೇಯ ಪಾಲುದಾರಿಕೆಯನ್ನು ನೀಡಿದರು. ವಿಶೇಷವೆಂದರೆ ಈ ಜೊತೆಯಾಟದಲ್ಲಿ ಜಡೇಜಾ ಕೇವಲ 3 ರನ್ ಗಳಿಸಿದರೆ, ಅಯ್ಯರ್ 14 ಎಸೆತಗಳಲ್ಲಿ 40 ರನ್ ಗಳಿಸಿದರು.

4 / 4
Follow us
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ